ತಮಿಳುನಾಡು: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಕೇರಳ ಸರ್ಕಾರದ ಕೆಎಸ್‌ಆರ್‌ಟಿಸಿ ಬಸ್ ಅತಿವೇಗದಿಂದ ನಿಯಂತ್ರಣ ತಪ್ಪಿ ಭೀಕರ ಅಪಘಾತ ಎಸಗಿದೆ.

ಈ ಅಪಘಾತದ ತೀವ್ರತೆಗೆ ಬಸ್ ಮೊದಲು ಕಾರಿಗೆ ಡಿಕ್ಕಿ ಹೊಡೆದು, ನಂತರ ದ್ವಿಚಕ್ರ ವಾಹನದಲ್ಲಿದ್ದ ದಂಪತಿಯನ್ನು ಹತ್ತಡಿ ಎತ್ತರಕ್ಕೆ ಹಾರಿಸಿದೆ. ಈ ಆಘಾತಕಾರಿ ದೃಶ್ಯ ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದ್ವಿಚಕ್ರ ವಾಹನದಲ್ಲಿದ್ದ ದಂಪತಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಚಾಲಕನ ಅಜಾಗರೂಕ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕನ್ಯಾಕುಮಾರಿಯಂತಹ ಪ್ರವಾಸಿ ತಾಣದಲ್ಲಿ ಇಂತಹ ಭೀಕರ ಅಪಘಾತ ಸಂಭವಿಸಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

View this post on Instagram

A post shared by News Karnataka (@newskarnataka)