ಮುಂಬೈ: ಹಾಡಹಗಲೇ ನಡುರಸ್ತೆಯಲ್ಲಿ ಮಹಿಳೆಯೊಬ್ಬರನ್ನು ಬಲವಂತವಾಗಿ ಕಾರಿನೊಳಗೆ ಎಳೆದುಕೊಂಡು ಹೋಗಿರುವ ಘಟನೆ ಮಹಾರಾಷ್ಟ್ರದ ಪುಣೆನಗರದಲ್ಲಿ ನಡೆದಿದೆ.

ಮಹಿಳೆಯನ್ನು ಎಳೆದುಕೊಂಡು ಹೋಗುತ್ತಿರುವ ವಿಡಿಯೋದಲ್ಲಿರುವ ವ್ಯಕ್ತಿ ಆಕೆಯ ಪತಿಯಾಗಿದ್ದು, ಕೌಟುಂಬಿಕ ಕಲಹದಿಂದ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಅಪಹರಣದ ನಂತರ, ಆಕೆಗೆ ಕಾರಿನಲ್ಲಿ ಬಂಧಿಸಿ ನಿದ್ರೆ ಮಾತ್ರೆಗಳನ್ನು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಪೊಲೀಸರ ಮಾಹಿತಿಯ ಪ್ರಕಾರ ಸಂತ್ರಸ್ತೆ ಮತ್ತು ಆಕೆಯ ಪತಿ ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರಂತೆ. ಕೆಲ ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳವಾಗಿದ್ದು, ಇದರಿಂದ ಬೇಸತ್ತ ಮಹಿಳೆಗೆ ಪೋಷಕರಿಲ್ಲದ ಕಾರಣ ತನ್ನ ಚಿಕ್ಕಪ್ಪನೊಂದಿಗೆ ವಾಸಿಸಲು ಪುಣೆಗೆ ಬಂದಿದ್ದಳು. ಸಂಬಂಧಿಕರು ಮಧ್ಯಸ್ಥಿಕೆ ವಹಿಸಿ ಮತ್ತೆ ಒಂದೂ ಮಾಡಿದರು ಮತ್ತೆ ಜಗಳವಾಗಿತ್ತು. ಇದೇ ಈ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.