Bengaluru 25°C
Ad

ಕಿಸಾನ್ ನಿಧಿ: ರೈತರಿಗೆ 20 ಸಾವಿರ ಕೋಟಿ ಹಣ ಬಿಡುಗಡೆ ಮಾಡಿದ ಮೋದಿ

ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶದ ಒಟ್ಟು 9.26 ಕೋಟಿ ರೈತರ ಖಾತೆಗಳಿಗೆ 20 ಸಾವಿರ ಕೋಟಿ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು.

ಲಕ್ನೋ: ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶದ ಒಟ್ಟು 9.26 ಕೋಟಿ ರೈತರ ಖಾತೆಗಳಿಗೆ 20 ಸಾವಿರ ಕೋಟಿ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು.

Ad
300x250 2

ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಪಿಎಂ ಕಿಸಾನ್ ನಿಧಿಗೆ ಸಂಬಂಧಿಸಿದ ಕಡತಕ್ಕೆ ಮೋದಿ ಮೊದಲ ಸಹಿ ಹಾಕಿದರು. ಇಂದು ಸ್ವಕ್ಷೇತ್ರದಲ್ಲಿ ನಡೆದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ, ಕೃಷಿ ಸಖಿಯರಾಗಿ ತರಬೇತಿ ಹೊಂದಿದ ಸ್ವಯಂ ಸಹಾಯಕ ತಂಡಗಳ ಮಹಿಳೆಯರಿಗೆ ಮೋದಿ ಪ್ರಮಾಣಪತ್ರ ವಿತರಿಸಿದರು. ಬಳಿಕ ವಾರಣಾಸಿಯ ದಶಾಶ್ವಮೇಧ ಘಾಟ್‍ನಲ್ಲಿ ನಡೆಯುವ ಗಂಗಾರತಿಯಲ್ಲಿ ಪ್ರಧಾನಿ ಮೋದಿ ಭಾಗಿಯಾದರು.

ಇದೇ ವೇಳೆ ವಾರಣಾಸಿಯಲ್ಲಿ ನಡೆದ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮೂರನೇ ಅವಧಿಯಲ್ಲಿ ರೈತರು ಮತ್ತು ಬಡವರಿಗೆ ಸಂಬಂಧಿಸಿದ ಮೊದಲ ನಿರ್ಧಾರ ತೆಗೆದುಕೊಂಡಿದ್ದೇನೆ. ದೇಶದಲ್ಲಿ ಬಡವರಿಗಾಗಿ ಮೂರು ಕೋಟಿ ಮನೆ ನಿರ್ಮಾಣ ಮಾಡುವ ಗುರಿ ಇದೆ.

ಕಿಸಾನ್ ಸಮ್ಮಾನ್ ನಿಧಿ ಮುಂದುವರಿಸಲು ನಿರ್ಧಾರ ಕೈಗೊಂಡಿದ್ದೇವೆ. ಈ ಯೋಜನೆಯು ಕೋಟ್ಯಂತರ ಜನರಿಗೆ ಲಾಭ ಮಾಡಲಿದೆ. ಇಂದು ಕೋಟ್ಯಂತರ ರೈತರು ನಮ್ಮ ಜೊತೆಗೆ ಸೇರಿದ್ದಾರೆ. ಕಿಸಾನ್ ಸಮ್ಮಾನ್ ನಿಧಿ ವಿಶ್ವದ ಅತಿದೊಡ್ಡ ಡಿಬಿಟಿ ಯೋಜನೆಯಾಗಿದೆ. ತಂತ್ರಜ್ಞಾನ ಬಳಸಿಕೊಂಡು ಫಲಾನುಭವಿಗೆ ನೇರ ಸರ್ಕಾರದ ಯೋಜನೆ ತಲುಪಿಸುತ್ತಿದೆ. ಯೋಜನೆಗೆ ಸೇರಲು ನಿಯಮಗಳನ್ನು ಇನ್ನಷ್ಟು ಸಡಿಲಿಸಲಾಗಿದೆ. ಕೃಷಿಯಲ್ಲಿ ನಾವು ಇನ್ನಷ್ಟು ಸ್ವಾವಲಂಬಿಯಾಗಬೇಕಿದೆ ಎಂದು ಹೇಳಿದರು.

 

 

Ad
Ad
Nk Channel Final 21 09 2023
Ad