Bengaluru 18°C

ಕೋಲ್ಕತಾ ವೈದ್ಯೆ ಹತ್ಯೆ ಕೇಸ್:‌ ಕಠಿಣ ಶಿಕ್ಷೆಯಿಂದ ಮಾತ್ರ ಇಂಥ ಪ್ರಕರಣಗಳಿಗೆ ಕೊನೆ : ಸೌರವ್ ಗಂಗೂಲಿ

ಇಲ್ಲಿನ ಆರ್​​ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಅಲ್ಲಿನ ಹೈಕೋರ್ಟ್ ಆದೇಶದ ಮೇರೆಗೆ ಸಿಬಿಐ ತನಿಖೆ ನಡೆಸುತ್ತಿದೆ. ಕನಿಷ್ಠ 30 ಶಂಕಿತರನ್ನು ಗುರುತಿಸಿದ್ದು ಪ್ರಶ್ನಿಸಲು ಪ್ರಾರಂಭಿಸಿದ್ದೇವೆ ಎಂದು ಸಿಬಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕೋಲ್ಕತಾ: ಇಲ್ಲಿನ ಆರ್​​ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಅಲ್ಲಿನ ಹೈಕೋರ್ಟ್ ಆದೇಶದ ಮೇರೆಗೆ ಸಿಬಿಐ ತನಿಖೆ ನಡೆಸುತ್ತಿದೆ. ಕನಿಷ್ಠ 30 ಶಂಕಿತರನ್ನು ಗುರುತಿಸಿದ್ದು ಪ್ರಶ್ನಿಸಲು ಪ್ರಾರಂಭಿಸಿದ್ದೇವೆ ಎಂದು ಸಿಬಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.


ಈ ಬಗ್ಗೆ ಬಿಸಿಸಿಐ ಮಾಜಿ ಅಧ್ಯಕ್ಷ ಹಾಗೂ ಪಶ್ಚಿಮ ಬಂಗಾಳದ ಕ್ರೀಡಾ ಐಕಾನ್ ಸೌರವ್ ಗಂಗೂಲಿ ಕಠಿಣ ಶಿಕ್ಷೆಯಿಂದ ಮಾತ್ರ ಇಂಥ ಪ್ರಕರಣಗಳಿಗೆ ಕೊನೆ ಎಂದು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಸೌರವ್ ಗಂಗೂಲಿ ಈ ಘಟನೆಯನ್ನು ಖಂಡಿಸಿದ್ದು, ಶಿಕ್ಷೆಯನ್ನು ಕಠಿಣಗೊಳಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.


ಈ ವಿಷಯದ ಬಗ್ಗೆ ಅವರು ತಮ್ಮ ಹಿಂದಿನ ಹೇಳಿಕೆಗಳಿಗೆ ಎದುರಾದ ಟೀಕೆಗಳಿಗೆ ಉತ್ತರ ಕೊಟ್ಟಿದ್ದಾರೆ. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಈ ಹಿಂದೆ ಗಂಗೂಲಿ ಇದನ್ನು ಯಾವುದೋ ಒಂದು ಘಟನೆ ಎಂದು ಕರೆದಿದ್ದರು ಎಂದು ಆರೋಪಿಸಿದ್ದರು. ಕೋಲ್ಕತಾ ಮೂಲದ ಭಾರತದ ಮಾಜಿ ತಾರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಇದನ್ನು ಸಂದರ್ಭಕ್ಕೆ ಅನುಗುಣವಾಗಿ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.


ಕಳೆದ ಭಾನುವಾರ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ವ್ಯಾಖ್ಯಾನಿಸಲಾಗಿದೆ. ನಾನು ಇದನ್ನು ಈ ಹಿಂದೆಯೂ ಹೇಳಿದ್ದೇನೆ ಇದೊಂದು ಭಯಾನಕ ಘಟನೆ. ಈಗ ಸಿಬಿಐ, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ನಡೆದಿರುವುದು ತುಂಬಾ ನಾಚಿಕೆಗೇಡಿನ ಸಂಗತಿ.


ಈ ಬಗ್ಗೆ ತನಿಖೆ ನಡೆಸುತ್ತಿರುವ ಸಿಬಿಐ, ಅಪರಾಧಿಯನ್ನು ಪತ್ತೆ ಹೆಚ್ಚಿ ಕಠಿಣ ಶಿಕ್ಷೆ ನೀಡಬೇಕು ಎಂದು ನಾನು ಆಗ್ರಹಿಸುತ್ತೇನೆ. ಶಿಕ್ಷೆಯು ಹೇಗಿರಬೇಕು ಎಂದರೆ ಯಾರೂ ತಮ್ಮ ಜೀವನದಲ್ಲಿ ಮತ್ತೆ ಅಂತಹ ಅಪರಾಧವನ್ನು ಮಾಡಲು ಧೈರ್ಯ ಮಾಡಬಾರದು ಎಂದು ಸೌರವ್ ಗಂಗೂಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.


Nk Channel Final 21 09 2023