ಪಶ್ಚಿಮ ಬಂಗಾಳ: ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಘೋಷ್ ರಾಜೀನಾಮೆ ನೀಡಿದ್ದಾರೆ.

ಈ ವೈದ್ಯಕೀಯ ಕಾಲೇಜಿನಲ್ಲಿ ಪಿಜಿ ವಿದ್ಯಾರ್ಥಿನಿಯೊಬ್ಬರು ಕೊಲೆಯಾಗಿದ್ದರು. ಕೊಲೆಗೂ ಮುನ್ನ ಮಹಿಳೆ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಈ ಘಟನೆಯ ನಂತರ, ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ ಮತ್ತು ವೈದ್ಯರ ಸಂಘಗಳು ನ್ಯಾಯಕ್ಕಾಗಿ ಒತ್ತಾಯಿಸುತ್ತಿವೆ.

ಅಷ್ಟರಲ್ಲಿ ಕಾಲೇಜಿನ ಪ್ರಾಂಶುಪಾಲರು ರಾಜೀನಾಮೆ ನೀಡಿದ್ದಾರೆ. ಆರಂಭದಲ್ಲಿ ಆರ್ ಜಿ ಕಾರ್ ಮೆಡಿಕಲ್ ಕಾಲೇಜಿನ ವೈದ್ಯರು ಪ್ರತಿಭಟನೆ ಆರಂಭಿಸಿದರು. ಇದಾದ ಬಳಿಕ ಬೇರೆ ಕಡೆಯ ವೈದ್ಯರು ಇದಕ್ಕೆ ಕೈಜೋಡಿಸಿದ್ದು, ಇದೀಗ ಏಮ್ಸ್ ವೈದ್ಯರೂ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ.

ಈ ಸಂಬಂಧ ಪೊಲೀಸರು ತನಿಖೆ ಪೂರ್ಣಗೊಳಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಅಂತಿಮ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ವರದಿ ಬಂದ ನಂತರ ಆರೋಪಿಗಳ ವಿರುದ್ಧ ವಿಚಾರಣೆ ಆರಂಭವಾಗಲಿದೆ.