ಕೋಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಆರೋಪಿ ತನ್ನ ಪತ್ನಿ, ತಂಗಿ, ತಾಯಿಯ ಮೇಲೂ ಹಲ್ಲೆ ನಡೆಸಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಸದಾ ಆತ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸುತ್ತಿರುತ್ತಿದ್ದ, ಆತನಿಗೆ ಮೂವರು ಪತ್ನಿಯರಿದ್ದಾರೆ, ಆದರೆ ಯಾವೊಬ್ಬ ಹೆಂಡತಿಯೂ ಜತೆಗಿಲ್ಲ.

ಆತ ತನ್ನ ತಂಗಿ, ತಾಯಿಯ ಮೇಲೂ ಹಲ್ಲೆ ನಡೆಸಿದ್ದ. ಕೋಲ್ಕತ್ತಾದ ಆರ್​ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ , ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿತ್ತು. ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ತನ್ನನ್ನು ಗಲ್ಲಿಗೇರಿಸುವಂತೆ ಕೇಳಿಕೊಂಡಿದ್ದಾನೆ.

ಶುಕ್ರವಾರ ಬೆಳಗ್ಗೆ ಪಶ್ಚಿಮ ಬಂಗಾಳದ ಸರ್ಕಾರಿ ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯರ ಶವ ಪತ್ತೆಯಾಗಿದೆ. ರಾಯ್ ಅವರನ್ನು ಶನಿವಾರ ಅವರ ಮನೆಯಿಂದ ಬಂಧಿಸಲಾಯಿತು. ವೈದ್ಯೆಯನ್ನು ಹತ್ಯೆಗೈದಿರುವ ಕಟ್ಟಡಕ್ಕೆ ಆತ ಪ್ರವೇಶಿಸಿದ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆತನನ್ನು ಬಂಧಿಸಲಾಗಿದೆ.