Bengaluru 18°C

ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನೆಲಬಾಂಬ್ ಸ್ಫೋಟ!

ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನೆಲಬಾಂಬ್ ಸ್ಫೋಟಗೊಂಡು ಕನಿಷ್ಠ 6 ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನೆಲಬಾಂಬ್ ಸ್ಫೋಟಗೊಂಡು ಕನಿಷ್ಠ 6 ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಸೈನಿಕರು ಗಸ್ತು ಕರ್ತವ್ಯದಲ್ಲಿ ತೆರಳುತ್ತಿದ್ದಾಗ ನೌಶೇರಾ ಸೆಕ್ಟರ್‌ನ ಖಂಬಾ ಕೋಟೆ ಬಳಿ ಬೆಳಿಗ್ಗೆ 10:45 ರ ಸುಮಾರಿಗೆ ಸೈನಿಕರೊಬ್ಬರು ಆಕಸ್ಮಿಕವಾಗಿ ನೆಲಬಾಂಬ್ ಮೇಲೆ ಹೆಜ್ಜೆ ಇಟ್ಟಿದ್ದಾರೆ. ಇದರಿಂದಾಗಿ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಉಗ್ರರ ಒಳನುಸುಳುವಿಕೆ ತಡೆಯಲು ಗಡಿ ನಿಯಂತ್ರಣ ರೇಖೆಯ ಬಳಿಯ ಪ್ರದೇಶಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗುತ್ತದೆ. ಅವು ಕೆಲವೊಮ್ಮೆ ಮಳೆಯಿಂದ ಕೊಚ್ಚಿಹೋಗುತ್ತವೆ. ಇದು ಕೆಲವೊಮ್ಮೆ ಇಂತಹ ಅವಘಡಗಳಿಗೆ ಕಾರಣವಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


Nk Channel Final 21 09 2023