ನವದೆಹಲಿ : ಗುಜರಾತ್‌ ವಿಮಾನ ಅಪಘಾತದ ನೈತಿಕ ಹೊಣೆಹೊತ್ತು ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.

1950 ರಲ್ಲಿ ರೈಲು ಅಪಘಾತ ಸಂಭವಿಸಿತ್ತು. ಆಗ ಪ್ರಧಾನಿಯಾಗಿದ್ದ ಲಾಲ್‌ ಬಹುದ್ದೂರ್‌ ಶಾಸ್ತ್ರಿ ರಾಜೀನಾಮೆ ನೀಡಿದ್ದರು. ಮೋದಿಯೂ ಅದೇ ಮಾದರಿ ಅನುಸರಿಸಬೇಕು ಎಂದು ಸ್ವಾಮಿ ಒತ್ತಾಯಿಸಿದ್ದಾರೆ.

ಪ್ರಧಾನಿ ಮೋದಿ, ಗೃಹಸಚಿವ ಅಮಿತ್‌ ಶಾ ಹಾಗೂ ನಾಗರಿಕ ವಿಮಾನಯಾನ ಸಚಿವ ಕಂಜರಪು ಮನಮೋಹನ್‌ ನಾಯ್ಡು ತಮ್ಮ ಹುದ್ದೆಗಳನ್ನು ಬಿಟ್ಟು ಕೆಳಗಿಳಿಯಬೇಕು. ಈ ಮೂಲಕ ಮುಕ್ತ ನ್ಯಾಯಸಮ್ಮತ ತನಿಖೆಗೆ ಅವಕಾಶ ಮಾಡಿಕೊಡಬೇಕೆಂದು ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ. ಅಲ್ಲದೇ ಪ್ರಧಾನಿ ಮೋದಿ ಇದುವರೆಗೂ ಅಲೆದಾಡುವುದು ಬಿಟ್ಟರೆ ಮತ್ತೇನೂ ಮಾಡಿಲ್ಲ. ಮೊದಲು ಅದನ್ನು ನಿಲ್ಲಿಸಲೇಬೇಕು ಎಂದು ಸುಬ್ರಹ್ಮಣಿಯನ್‌ ಸ್ವಾಮಿ ಹೇಳಿದ್ದಾರೆ.