ನವದೆಹಲಿ: ದೆಹಲಿ ಮದ್ಯದ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಆರ್‌ಎಸ್  ನಾಯಕಿ ಕೆ.ಕವಿತಾ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಜುಲೈ 3ರವರೆಗೆ ವಿಸ್ತರಿಸಿದೆ.

ಸೋಮವಾರ ಕವಿತಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದರು.

ಇದೇ ಪ್ರಕರಣದ ಇತರ ಮೂವರು ಆರೋಪಿಗಳಾದ ರಾಜಕುಮಾರ್, ಅರವಿಂದ್ ಮತ್ತು ದಾಮೋದರ್ ಅವರಿಗೆ ರೋಸ್ ಅವೆನ್ಯೂ ನ್ಯಾಯಾಲಯವು 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಿದೆ.

ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಮೇ 15ರಂದು ಕವಿತಾ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕವಿತಾ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದ ಸಿಬಿಐ ಮತ್ತು ಇಡಿ, ಕವಿತಾ ಅವರು ಹೆಚ್ಚು ಪ್ರಭಾವಿ ಮತ್ತು ಶಕ್ತಿಯುತರಾಗಿದ್ದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಹೇಳಿತ್ತು.

ದೆಹಲಿ ಅಬಕಾರಿ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ  ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿ ಒಟ್ಟು 18 ಮಂದಿಯನ್ನು ಇಡಿ ಬಂಧಿಸಿದೆ.