ಡೆಹ್ರಾಡೂನ್: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ರೈಲುಗಳು ಸುರಂಗದೊಳಗೆ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.
ಉತ್ತರಾಖಂಡದ ಚಮೋಲಿ ಜಿಲ್ಲೆಯ ಜಲವಿದ್ಯುತ್ ಯೋಜನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಅಪಘಾತಕ್ಕೊಳಗಾಗಿದ್ದಾರೆ. ಮಚು ಪಿಚುಗೆ ಸೇವೆ ಸಲ್ಲಿಸುವ ರೈಲು ಮಾರ್ಗದಲ್ಲಿ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ದುರ್ಘಟನೆಯಲ್ಲಿ ಒಬ್ಬರ ಸಾವಾಗಿದ್ದು, 40 ಜನರು ಗಾಯಗೊಂಡಿದ್ದಾರೆ ಎಂದು ಪೆರುವಿಯನ್ ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡ ಪ್ರಯಾಣಿಕರನ್ನು ಗುರುತಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟಿಎಚ್‌ಡಿಸಿ ನಡೆಸುತ್ತಿರುವ ವಿಷ್ಣುಗಡ-ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯಲ್ಲಿ ರಾತ್ರಿ 9:30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸುರಂಗದೊಳಗೆ ಚಲಿಸುತ್ತಿದ್ದ ಎರಡು ಲೋಕೋ ರೈಲುಗಳು ಶಿಫ್ಟ್ ಬದಲಾವಣೆಯ ಸಮಯದಲ್ಲಿ ಪರಸ್ಪರ ಡಿಕ್ಕಿ ಹೊಡೆದಿವೆ. ಡಿಕ್ಕಿಯ ಸಮಯದಲ್ಲಿ ಒಟ್ಟು 109 ಕಾರ್ಮಿಕರು ರೈಲುಗಳಲ್ಲಿದ್ದರು ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

