ನವದೆಹಲಿ: ಇಂದು ಲೋಕಸಭೆ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯ್ತು, ಸದನದ ಹೊರಗೆ ಚುನಾವಣಾ ಸಮಾವೇಶಗಳಲ್ಲಿ ಸದಾ ಪರಸ್ಪರ ಆರೋಪ ಪ್ರತ್ಯಾರೋಪಗಳಿಂದಲೇ ಒಬ್ಬರ ಮೇಲೊಬ್ಬರು ಕೆಸರೆರುಚುತ್ತಿದ್ದ ಪ್ರಧಾನಿ ಮೋದಿ ಹಾಗೂ ಲೋಕಸಭೆಯ ನಿಯೋಜಿತ ವಿಪಕ್ಷ ನಾಯಕ ರಾಹುಲ್ ಗಾಂಧಿ ಪರಸ್ಪರ ಹಸ್ತಲಾಘವ ಮಾಡುವ ಮೂಲಕ ಅಚ್ಚರಿಗೆ ಕಾರಣವಾದರು.

ಹೊಸದಾಗಿ ಲೋಕಸಭಾ ಸ್ಪೀಕರ್ ಆಗಿ ನೇಮಕವಾಗಿರುವ ಓಂ ಬಿರ್ಲಾ ಅವರ ನೇಮಕದ ವೇಳೆ ಈ ಅಚ್ಚರಿ ಘಟನೆ ನಡೆಯಿತು.

18ನೇ ಲೋಕಸಭೆ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್‌ನಲ್ಲಿ ಪರಸ್ಪರ ಶೇಕ್ ಹ್ಯಾಂಡ್ ಮಾಡಿದ್ದರು. ಇಬ್ಬರು ಜೊತೆಯಾಗಿ ನೂತನ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಸ್ವಾಗತಿಸುವ ವೇಳೆ ಈ ಘಟನೆ ನಡೆಯಿತು.

ರಾಹುಲ್ ಗಾಂಧಿ ಲೋಕಸಭೆ ವಿರೋಧ ಪಕ್ಷದ ನಾಯಕನಾಗಿರುವ ಗಾಂಧಿ ಕುಟುಂಬದ ಮೂರನೇ ವ್ಯಕ್ತಿಯಾಗಿದ್ದಾರೆ. ಈ ಹಿಂದೆ ರಾಹುಲ್ ಗಾಂಧಿ ತಾಯಿ ಸೋನಿಯಾ ಗಾಂಧಿ 1999ರಿಂದ 2004ರವರೆಗೆ ಲೋಕಸಭೆಯ ವಿರೋಧ ಪಕ್ಷದ ನಾಯಕಿಯಾಗಿದ್ದರು. ಅದಕ್ಕೂ ಮೊದಲು ರಾಹುಲ್ ತಂದೆ ರಾಜೀವ್ ಗಾಂಧಿ 1989ರಿಂದ 1990ರವರೆಗೆ ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿದ್ದರು.

https://x.com/i/status/1805843467630686528