ಉತ್ತರ ಪ್ರದೇಶ: ಎಲ್‌ಪಿಜಿ ಟ್ಯಾಂಕರ್ ನಿಯಂತ್ರಣ ತಪ್ಪಿ ಟೋಲ್ ಬೂತ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐದು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ.
ಡಿಕ್ಕಿ ಹೊಡೆದ ಕೆಲವೇ ಕ್ಷಣಗಳಲ್ಲಿ, ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗಿ, ಭಾರೀ ಸ್ಫೋಟ ಸಂಭವಿಸಿ, ಇಡೀ ಪ್ರದೇಶ ಬೆಂಕಿಯಲ್ಲಿ ಮುಳುಗಿತು. ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ.

