ಮಹಾರಾಷ್ಟ್ರ : ಮಹಾರಾಷ್ಟ್ರ ಸರ್ಕಾರ ಇಂದು ಹಸುವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದೆ. ಭಾರತೀಯ ಸಂಪ್ರದಾಯದಲ್ಲಿ ಗೋವುಗಳ ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಉಲ್ಲೇಖಿಸಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಕುರಿತಾದ ಅಧಿಕೃತ ಆದೇಶದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು ಹಸು ಭಾರತೀಯ ಸಂಪ್ರದಾಯದ ಪ್ರಮುಖ ಭಾಗವಾಗಿದೆ ಮತ್ತು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ, ವೈಜ್ಞಾನಿಕ ಮಹತ್ವವನ್ನು ಹೊಂದಿದೆ ಎಂದು ಹೇಳಿದೆ.
ದೇಶಿ ಹಸುಗಳು ಕಡಿಮೆಯಾಗುತ್ತಿರುವ ಬಗ್ಗೆ ಮಹಾರಾಷ್ಟ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಭಾರತದಾದ್ಯಂತ ಕಂಡುಬರುವ ವಿವಿಧ ತಳಿಯ ಹಸುಗಳನ್ನು ಎತ್ತಿ ತೋರಿಸುತ್ತಾ, ಮಹಾರಾಷ್ಟ್ರ ಸರ್ಕಾರವು ಸ್ಥಳೀಯ ಹಸುಗಳ ಸಂಖ್ಯೆಯಲ್ಲಿನ ಇಳಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿತು. ಈ ಹೆನ್ನಲೆಯಲ್ಲಿ ಹಸುವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದೆ.
Ad