ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಐತಿಹಾಸಿಕ ಮಹಾ ಕುಂಭಮೇಳದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಶಾಸ್ತ್ರೀ ಬ್ರಿಡ್ಜ್ ಸೆಕ್ಟರ್ 19ರಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಶಾಸ್ತ್ರಿ ಬ್ರಿಡ್ಜ್ ಸೆಕ್ಟರ್ 19ರಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿರೋ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಶಾರ್ಟ್ ಸರ್ಕ್ಯೂಟ್ನಿಂದ ಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ಮೊದಲು ಒಂದು ಟೆಂಟ್ನಲ್ಲಿ ಹೊತ್ತಿದ ಬೆಂಕಿ ಬಳಿಕ ಪಕ್ಕದ 25ಕ್ಕೂ ಹೆಚ್ಚು ಟೆಂಟ್ಗಳಿಗೆ ಆವರಿಸಿದೆ. ಅಲ್ಲದೇ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೊಂದಾಗಿ ಸಿಲಿಂಡರ್ಗಳು ಬ್ಲಾಸ್ಗೊಳ್ಳುತ್ತಿವೆ. ಭಾರೀ ಅಗ್ನಿ ಅವಘಡದಲ್ಲಿ ಹಲವು ವಾಹನಗಳು ಸುಟ್ಟು ಭಸ್ಮಗೊಂಡಿವೆ.
ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ 6ಕ್ಕೂ ಹೆಚ್ಚು ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇನ್ನೂ, ಈ ಮಹಾ ಕುಂಭಮೇಳಕ್ಕೆ ಸಾಧು ಸಂತರು ಸೇರಿದಂತೆ ಕೋಟ್ಯಾಂತರ ಭಕ್ತರು ಆಗಮಿಸಿದ್ದರು.
ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ ಪುನೀತರಾಗುತ್ತಿದ್ದರು. ಆದ್ರೆ ಇದೇ ಹೊತ್ತಲ್ಲಿ ಪ್ರಯಾಗ್ರಾಜ್ನ ಶಾಸ್ತ್ರಿ ಬ್ರಿಡ್ಜ್ ಸೆಕ್ಟರ್ 19ರಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.