Bengaluru 29°C
Ad

ನರೇಂದ್ರ ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗಿ

ಇಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ  ಅವರ ಪ್ರಮಾಣ ವಚನ ಸಮಾರಂಭದಲ್ಲಿ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಖರ್ಗೆ ಅವರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.

ನವದೆಹಲಿ: ಇಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ  ಅವರ ಪ್ರಮಾಣ ವಚನ ಸಮಾರಂಭದಲ್ಲಿ ಕಾಂಗ್ರೆಸ್ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.

ಶನಿವಾರ ಹಲವಾರು ಇಂಡಿಯಾ ಒಕ್ಕೂಟದ ಸದಸ್ಯರ ಜೊತೆ ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಇಂಡಿಯಾ ಒಕ್ಕೂಟದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್  ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿಕೊಂಡಿದೆ.

ಇಂದು ಎನ್‌ಡಿಎ ಮಿತ್ರ ಪಕ್ಷಗಳ ಜೊತೆ ಸೇರಿ ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Ad
Ad
Nk Channel Final 21 09 2023
Ad