Bengaluru 27°C
Ad

ಯಾತ್ರಾರ್ಥಿಗಳಿದ್ದ ಬಸ್‌ ಮೇಲೆ ಉಗ್ರರ ದಾಳಿ: ತನಿಖೆಗೆ ಮಮತಾ ಬ್ಯಾನರ್ಜಿ ಆಗ್ರಹ

Didi

ಕೋಲ್ಕತ್ತ: ಜಮ್ಮು ಮತ್ತು ಕಾಶ್ಮೀರದಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತನಿಖೆಗೆ ಆಗ್ರಹಿಸಿದ್ದಾರೆ.

Ad

‘ಜಮ್ಮು ಮತ್ತು ಕಾಶ್ಮೀರದಲ್ಲಿ ಯಾತ್ರಾರ್ಥಿಗಳಿದ್ದ ಬಸ್‌ ಮೇಲೆ ಉಗ್ರರು ದಾಳಿ ನಡೆಸಿರುವ ವಿಷಯ ತಿಳಿದು ದುಃಖವಾಗಿದೆ. ದಾಳಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಈ ಸಂಬಂಧ ತಕ್ಷಣವೇ ತನಿಖೆ ಆರಂಭಿಸಬೇಕು. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ’ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

Ad

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಪೋನಿ ಪ್ರದೇಶದ ತೇರ್ಯತ್ ಗ್ರಾಮದಲ್ಲಿ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದರ ಮೇಲೆ ಭಾನುವಾರ ಸಂಜೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 10 ಮಂದಿ ಮೃತಪಟ್ಟಿದ್ದು, 33 ಜನರು ಗಾಯಗೊಂಡಿದ್ದಾರೆ.

Ad
Ad
Ad
Nk Channel Final 21 09 2023