ಹುಬ್ಬಳ್ಳಿ: ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಶಂಕಿಸಿ ತಾಲ್ಲೂಕಿನ ಬ್ಯಾಹಟ್ಟಿ ಗ್ರಾಮ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಆರೋಪದ ಮೇಲೆ ಪಕಾಶ ಕರಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಗ್ರಾಮದ ಪಕ್ಕಿರೇಶ ಅಕ್ಕಿವಳ್ಳಿ (33) ಕೊಲೆಯಾದವರು. ಗ್ರಾಮದ ಶಾಂತಿನಗರ ಪ್ಲಾಟ್‌ನ ಬಸ್ ನಿಲ್ದಾಣದ ಬಳಿ ಶುಕ್ರವಾರ ರಾತ್ರಿ ಪಕ್ಕಿರೇಶ ಅವರನ್ನು ಅಡ್ಡಗಟ್ಟಿರುವ ಪ್ರಕಾಶ, ಕೊಡಲಿಯಿಂದ ಹೊಡೆದಿದ್ದಾನೆ. ತಪ್ಪಿಸಿಕೊಳ್ಳಲು ಯತ್ನಿಸಿದರೂ ಬೆನ್ನಟ್ಟಿ ಹೋಗಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.