ಕೊಲ್ಕತ್ತಾ: ಕೊಲ್ಕತ್ತಾದ ಎಸ್‌ಎನ್ ಬ್ಯಾನರ್ಜಿ ರಸ್ತೆಯಲ್ಲಿ ಇಂದು (ಶನಿವಾರ) ಭಾರೀ ಅಪಘಾತ ಸಂಭವಿಸಿದೆ. ಬ್ಲೋಚ್‌ಮನ್ ಸ್ಟ್ರೀಟ್ ಮತ್ತು ಎಸ್‌ಎನ್ ಬ್ಯಾನರ್ಜಿ ರಸ್ತೆಯ ಜಂಕ್ಷನ್‌ನಲ್ಲಿ ನಡೆದ ಸ್ಫೋಟದಲ್ಲಿ ಒಬ್ಬರು ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಫೋಟ ಸಂಭವಿಸಿದ ಪ್ರದೇಶವನ್ನು ಸೀಲ್ ಮಾಡಲಾಗಿದ್ದು, ಬಾಂಬ್ ನಿಷ್ಕ್ರಿಯ ದಳವನ್ನು ನಿಯೋಜಿಸಲಾಗಿದೆ. ಸ್ಫೋಟದ ಸುದ್ದಿ ತಿಳಿದ ತಕ್ಷಣ ತಲಾತಾಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಇಡೀ ಪ್ರದೇಶವನ್ನು ಭದ್ರತಾ ಪಡೆ ಸುತ್ತುವರೆದಿದ್ದು, ಸಾರ್ವಜನಿಕರು ಘಟನಾ ಸ್ಥಳದ ಸಮೀಪಕ್ಕೆ ಹೋಗದಂತೆ ತಡೆಯಲಾಗಿದೆ. ಇದಲ್ಲದೇ ಬಾಂಬ್ ನಿಷ್ಕ್ರಿಯ ದಳವನ್ನು ಕೂಡ ಕರೆಸಲಾಗಿದ್ದು, ಬೇರೆ ಯಾವುದೇ ಸ್ಫೋಟಕ ವಸ್ತು ಇಲ್ಲದಂತೆ ನೋಡಿಕೊಳ್ಳಲಾಗುವುದು.
VIDEO | Rag picker, identified as Bapi Das, injured in blast on SN Banerjee Road in central Kolkata earlier today. More details awaited.
(Source: Third Party) pic.twitter.com/5pohm19FoB
— Press Trust of India (@PTI_News) September 14, 2024