ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ಎಲ್ಲರಿಗೂ 2026ರ ಹೊಸ ವರ್ಷದ ಶುಭಾಶಯಗಳು. ಈ ವರ್ಷವು ಎಲ್ಲರಿಗೂ ಆರೋಗ್ಯ ಮತ್ತು ಸಮೃದ್ಧಿ ತರಲಿ.
— Narendra Modi (@narendramodi) January 1, 2026
ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಮತ್ತು ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ನೆರವೇರಲಿ ಎಂದು ಹಾರೈಸುತ್ತೇನೆ. ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷ ನೆಲೆಸಲಿ ಎಂದು ಪ್ರಾರ್ಥಿಸಿದ್ದಾರೆ.

