ಆಂಧ್ರಪ್ರದೇಶ: ಬುದ್ಧಿಮಾಂದ್ಯ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ.

ಈ ಮೊದಲೇ ಆಕೆ ಬುದ್ಧಿಮಾದ್ಯಳು ಎಂಬುದನ್ನು ಅರಿತಿದ್ದ 50 ವರ್ಷದ ಆರೋಪಿ 43 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿ ಮನೆಗೆ ನುಗ್ಗಿದ್ದ ಆರೋಪಿ ಏನೂ ಅರಿಯದ ಮಹಿಳೆಗೆ ಹಿಂಸೆ ಕೊಟ್ಟಿದ್ದಲ್ಲೆ ಅತ್ಯಾಚಾರವೆಸಗಿದ್ದಾನೆ. ನಂತರ ಮಹಿಳೆಯ ಕುಟುಂಬದವರು ಮನೆಗೆ ಹಿಂದಿರುಗಿದಾಗ ಆಕೆಗೆ ರಕ್ತಸ್ರಾವವಾಗುತ್ತಿರುವುದನ್ನು ಗಮನಿಸಿದರು.

ಮಹಿಳೆ ತನಗೆ ತಿಳಿದ ಎಲ್ಲಾ ವಿಚಾರವನ್ನು ಕುಟುಂಬದವರ ಬಳಿ ಹೇಳಿಕೊಂಡಿದ್ದಾರೆ. ನಂತರ, ಪೊಲೀಸ್ ದೂರು ದಾಖಲಿಸಲಾಗಿದೆ, ಮತ್ತು ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.