ಶ್ರೀನಗರ: ರಜೌರಿಯಲ್ಲಿರುವ ಸೇನಾ ನೆಲೆಯನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದು, ಗುಂಡಿನ ಚಕಮಕಿ ಮುಂದುವರೆದಿದೆ. ಉಗ್ರರನ್ನು ಮಟ್ಟ ಹಾಕಲು ಬಹುದೊಡ್ಡ ಮಟ್ಟದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಸೇನೆ ತಿಳಿಸಿದೆ.

ಘಟನೆ ಬಗ್ಗೆ ರಕ್ಷಣಾ ಇಲಾಖೆ ವಕ್ತಾರ ಲೆ.ಕರ್ನಲ್‌ ಸುನೀಲ್‌ ಬರ್ಟ್ವಾಲ್‌ ಪ್ರತಿಕ್ರಿಯಿಸಿದ್ದು, ದೂರದ ರಜೌರಿ ಗ್ರಾಮದಲ್ಲಿ ಸೇನಾ ನೆಲೆ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಲಾಗಿದೆ. ಉಗ್ರರಿಗೆ ಪ್ರತಿದಾಳಿ ಮೂಲಕ ಸೇನೆ ತಕ್ಕ ಉತ್ತರ ನೀಡಿದೆ. ರಜೌರಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಗ್ರರು ಅಡಗಿರುವುದು ಖಚಿತವಾಗಿದ್ದು, ಸೇನೆ ಕಾರ್ಯಾಚರಣೆ ಕೈಗೆತ್ತಿಕೊಂಡಿದೆ. ಭಾರೀ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.