Bengaluru 22°C
Ad

ರಾಹುಲ್‌ ಗಾಂಧಿ ಭಾರತದ ನಂ.1 ಭಯೋತ್ಪಾದಕ: ಕೇಂದ್ರ ಸಚಿವ ವಿವಾದಾತ್ಮಕ ಹೇಳಿಕೆ

ರಾಹುಲ್‌ ಗಾಂಧಿ ಭಾರತದ ನಂಬರ್‌ 1 ಭಯೋತ್ಪಾದಕ. ಆತ ಭಾರತೀಯನಲ್ಲ ಎಂದು ಕೇಂದ್ರ ಸಚಿವ ರವನೀತ್‌ ಸಿಂಗ್‌ ಬಿಟ್ಟು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಇತ್ತೀಚೆಗೆ ಅಮೆರಿಕಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿಖ್ಖರ ಕುರಿತು ನೀಡಿದ್ದ ಹೇಳಿಕೆ ಟೀಕಿಸುವ ಭರದಲ್ಲಿ ಕೇಂದ್ರ ಸಚಿವ ರವನೀತ್‌ ನಾಲಿಗೆ ಹರಿಬಿಟ್ಟಿದ್ದಾರೆ. ರಾಹುಲ್‌ ಗಾಂಧಿ ದೇಶದ ಬಹುದೊಡ್ಡ ಶತ್ರು. ಅವರನ್ನು ಹಿಡಿದುಕೊಟ್ಟವರಿಗೆ ತಕ್ಕ ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. 

ನವದೆಹಲಿ: ರಾಹುಲ್‌ ಗಾಂಧಿ ಭಾರತದ ನಂಬರ್‌ 1 ಭಯೋತ್ಪಾದಕ. ಆತ ಭಾರತೀಯನಲ್ಲ ಎಂದು ಕೇಂದ್ರ ಸಚಿವ ರವನೀತ್‌ ಸಿಂಗ್‌ ಬಿಟ್ಟು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಇತ್ತೀಚೆಗೆ ಅಮೆರಿಕಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿಖ್ಖರ ಕುರಿತು ನೀಡಿದ್ದ ಹೇಳಿಕೆ ಟೀಕಿಸುವ ಭರದಲ್ಲಿ ಕೇಂದ್ರ ಸಚಿವ ರವನೀತ್‌ ನಾಲಿಗೆ ಹರಿಬಿಟ್ಟಿದ್ದಾರೆ. ರಾಹುಲ್‌ ಗಾಂಧಿ ದೇಶದ ಬಹುದೊಡ್ಡ ಶತ್ರು. ಅವರನ್ನು ಹಿಡಿದುಕೊಟ್ಟವರಿಗೆ ತಕ್ಕ ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮೊದಲು ಅವರು ಮುಸ್ಲಿಮರನ್ನು ಬಳಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಅದು ಆಗಲಿಲ್ಲ. ಈಗ ಅವರು ಸಿಖ್ಖರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ. ರಾಹುಲ್ ಗಾಂಧಿಗೂ ಮೊದಲು ದೇಶದ ಮೋಸ್ಟ್ ವಾಂಟೆಡ್ ವ್ಯಕ್ತಿಗಳು ಈ ಹಿಂದೆ ಇಂತಹ ಹೇಳಿಕೆಗಳನ್ನು ನೀಡಿದ್ದರು. ಭಯೋತ್ಪಾದಕರು ಕೂಡ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಶ್ಲಾಘಿಸಿದ್ದಾರೆ. ಅಂತಹ ಜನರು ರಾಹುಲ್ ಗಾಂಧಿಯನ್ನು ಬೆಂಬಲಿಸುವುದಾದರೆ, ಇವರು ಕೂಡ ದೇಶದ ನಂ.1 ಭಯೋತ್ಪಾದಕರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Ad
Ad
Nk Channel Final 21 09 2023