ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಭಾರಿ ಬದಲಾವಣೆಯಾಗಿದ್ದು, ಅಲ್ಲಿನ ವಿಧಾನಸಭಾ ಚುನಾವಣೆಯಲ್ಲಿಆಡಳಿತಾರೂಢ ಡಿಎಂಕೆ ಪಕ್ಷವು ಸೋಲನ್ನು ಅನುಭವಿಸಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಎಂ.ಕೆ. ಸ್ಟಾಲಿನ್ ರಾಜೀನಾಮೆ ನೀಡಿದ್ದಾರೆ.
ಚುನಾವಣಾ ಫಲಿತಾಂಶ ಹೊರಬಂದ ಬೆನ್ನಲ್ಲೇ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ಸ್ಟಾಲಿನ್ ರವಾನಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷವು ಭರ್ಜರಿ ಜಯ ಸಾಧಿಸುವ ಮೂಲಕ ಎಲ್ಲರ ಗಮನ ಸೆಳೆದಿದೆ.
ಎಂ.ಕೆ. ಸ್ಟಾಲಿನ್ ಅವರ ಡಿಎಂಕೆ ಪಕ್ಷವು ಕೇವಲ 59 ಸ್ಥಾನಗಳನ್ನು ಪಡೆಯಲಷ್ಟೇ ಶಕ್ತವಾಗಿದ್ದು, ಮುಂದಿನ ದಿನಗಳಲ್ಲಿ ಪ್ರಬಲ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲಿದೆ. ಸ್ಟಾಲಿನ್ ಅವರು ತಮ್ಮ ಸ್ವಕ್ಷೇತ್ರವಾದ ಕೊಳತ್ತೂರಿನಲ್ಲಿ ಕೂಡ ಟಿವಿ ಕೆ ಅಭ್ಯರ್ಥಿ ವಿ.ಎಸ್. ಬಾಬು ಅವರ ವಿರುದ್ಧ ಸೋಲನ್ನು ಅನುಭವಿಸಿರುವುದು ಅವರ ಬೆಂಬಲಿಗರಿಗೆ ತೀವ್ರ ಆಘಾತ ತಂದಿದೆ. ಇನ್ನು ಎಐಎಡಿಎಂಕೆ ಪಕ್ಷವು 47 ಸ್ಥಾನಗಳನ್ನು ಗೆದ್ದುಕೊಂಡಿದೆ.

