ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಉರುಳಿ ಬಿದ್ದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಶುಕ್ರವಾರ ಕ್ಷಮೆಯಾಚಿಸಿದ್ದಾರೆ. 2013ರಲ್ಲಿ ಬಿಜೆಪಿ ನನ್ನನ್ನು ಪ್ರಧಾನಿ ಅಭ್ಯರ್ಥಿ ಎಂದು ಹೆಸರಿಸಿತ್ತು. ನಾನು ಮಾಡಿದ ಮೊದಲ ಕೆಲಸವೆಂದರೆ ರಾಯಗಢದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಸಮಾಧಿಯ ಮುಂದೆ ಭಕ್ತನಾಗಿ ಕುಳಿತು ಹೊಸ ಪ್ರಯಾಣವನ್ನು ಪ್ರಾರಂಭಿಸಿದೆ ಎಂದು ಮೋದಿ ಪಾಲ್ಘರ್‌ನಲ್ಲಿ ಹೇಳಿದ್ದಾರೆ

“ಛತ್ರಪತಿ ಶಿವಾಜಿ ಮಹಾರಾಜರು ನಮಗೆ ಕೇವಲ ಹೆಸರಲ್ಲ… ಇಂದು ನಾನು ನನ್ನ ದೇವರು ಛತ್ರಪತಿ ಶಿವಾಜಿ ಮಹಾರಾಜರಲ್ಲಿ ತಲೆಬಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಮೌಲ್ಯಗಳು ವಿಭಿನ್ನವಾಗಿವೆ. ನಾವು ಭಾರತ ಮಾತೆಯ ಮಹಾನ್ ಮಗ, ಈ ನೆಲದ ಮಗ ವೀರ್ ಸಾವರ್ಕರ್ ಅವರನ್ನು ನಿಂದಿಸುವ ಮತ್ತು ಅವಮಾನಿಸುವ ಜನರಲ್ಲ. ಅವರು ಕ್ಷಮೆ ಕೇಳಲು ಸಿದ್ಧರಿಲ್ಲ, ನ್ಯಾಯಾಲಯದ ಮೊರೆ ಹೋಗಿ ಹೋರಾಟಕ್ಕೆ ಸಿದ್ಧರಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಆಗಸ್ಟ್ 26 ರಂದು 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತದ ವಿವಾದದ ನಡುವೆಯೇ ಪ್ರಧಾನಿಯವರು ಪ್ರತಿಕ್ರಿಯಿಸಿದ್ದಾರೆ.