Ad

ಯೋಗ ಎಲ್ಲರ ದೈನಂದಿನ ಜೀವನದ ಭಾಗವಾಗಲಿ ಎಂದು ಕರೆ ನೀಡಿದ ಮೋದಿ

ಜಮ್ಮು  ಕಾಶ್ಮೀರದ ಶ್ರೀನಗರದಲ್ಲಿ ಇಂದು ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಯೋಗವನ್ನು ಎಲ್ಲರೂ ತಮ್ಮ ದೈನಂದಿನ ಜೀವನದ ಭಾಗವಾಗಲಿ ಎಂದರು.

ಶ್ರೀನಗರ: ಜಮ್ಮು  ಕಾಶ್ಮೀರದ ಶ್ರೀನಗರದಲ್ಲಿ ಇಂದು ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಯೋಗವನ್ನು ಎಲ್ಲರೂ ತಮ್ಮ ದೈನಂದಿನ ಜೀವನದ ಭಾಗವಾಗಲಿ ಎಂದರು.

Ad
300x250 2

ಯೋಗದ ಮೂಲಕ ನಾವು ಹೆಚ್ಚಿನ ಶಕ್ತಿಯನ್ನು ಪಡೆಯಬಹುದು. ಯೋಗ ದಿನದಂದು ದೇಶದ ಜನರಿಗೆ ಮತ್ತು ವಿಶ್ವದ ಮೂಲೆ ಮೂಲೆಗಳಲ್ಲಿ ಯೋಗ ಮಾಡುವ ಜನರಿಗೆ ನಾನು ಶುಭಾಶಯಗಳನ್ನು ಹೇಳುತ್ತೇನೆ ಎಂದರು.

ಅಂತಾರಾಷ್ಟ್ರೀಯ ಯೋಗ ದಿನವು 10 ವರ್ಷಗಳ ಐತಿಹಾಸಿಕ ಪ್ರಯಾಣವನ್ನು ಪೂರ್ಣಗೊಳಿಸಿದೆ. ನಾನು ವಿದೇಶದಲ್ಲಿರುವಾಗ ಜಾಗತಿಕ ನಾಯಕರು ಯೋಗದ ಬಗ್ಗೆ ನನ್ನೊಂದಿಗೆ ಚರ್ಚಿಸುತ್ತಾರೆ. ನಾವು 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತಿರುವ ಹೊತ್ತಿನಲ್ಲಿ, ಯೋಗವನ್ನು ತಮ್ಮ ದೈನಂದಿನ ಜೀವನದ ಭಾಗವಾಗಿಸಲು ನಾನು ಪ್ರತಿಯೊಬ್ಬರನ್ನು ಕೋರುತ್ತೇನೆ ಎಂದು ಅವರು ಕರೆ ನೀಡಿದರು.

ಶ್ರೀನಗರದ ಶೇರ್-ಎ-ಕಾಶ್ಮೀರ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 10ನೇ ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆಯ ನೇತೃತ್ವವನ್ನು ಪ್ರಧಾನಿ ಮೋದಿ ವಹಿಸಿದರು.  ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಆಯುಷ್ ಸಚಿವ ಪ್ರತಾಪ್ರರಾವ್ ಗಣಪತರಾವ್ ಜಾಧವ್ ಸೇರಿದಂತೆ ಇತರರು ಭಾಗವಹಿಸಿದರು.

ಈ ವರ್ಷ ಫ್ರಾನ್ಸ್‌ನ 101 ವರ್ಷದ ಮಹಿಳಾ ಯೋಗ ಶಿಕ್ಷಕಿಗೆ ಪದ್ಮಶ್ರೀ ನೀಡಲಾಗಿದೆ. ಅವರು ಎಂದಿಗೂ ಭಾರತಕ್ಕೆ ಬಂದಿರಲಿಲ್ಲ. ಆದರೆ ಅವರು ಯೋಗದ ಬಗ್ಗೆ ಜಾಗೃತಿ ಮೂಡಿಸಲು ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಇಂದು ಯೋಗದ ಕುರಿತು ಪ್ರಪಂಚದಾದ್ಯಂತ ಸಂಶೋಧನೆ ನಡೆಸಲಾಗುತ್ತಿದೆ. ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳು ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸುತ್ತಿವೆ ಎಂದು ಪ್ರಧಾನಿ ಹೇಳಿದರು. ಇಂದು ದೇಶಾದ್ಯಂತ ಹಾಗೂ ವಿದೇಶಗಳಲ್ಲಿಯೂ ಯೋಗ ದಿನ ಆಚರಿಸಲಾಗುತ್ತಿದೆ.

Ad
Ad
Nk Channel Final 21 09 2023
Ad