ದೆಹಲಿ: ಸ್ವಾತಂತ್ರ್ಯ ದಿನಾಚರಣೆ ಸನ್ನಿಹಿತವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು : ಹರ್ ಘರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ದೇಶವಾಸಿಗಳಿಗೆ ಕರೆ ನೀಡಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ತಮ್ಮ ಪ್ರೊಫೈಲ್ ಚಿತ್ರವನ್ನು ತ್ರಿವರ್ಣಕ್ಕೆ ಬದಲಾಯಿಸಿದ್ದಾರೆ. ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿ ದೇಶವಾಸಿಗಳಿಗೆ ಕರೆ ನೀಡಿದರು.
ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿದೆ, ಮತ್ತೊಮ್ಮೆ ಹರ್ ಘರ್ ತಿರಂಗಾ ಅಭಿಯಾನವನ್ನು ಸ್ಮರಣೀಯ ಜನಾಂದೋಲನವನ್ನಾಗಿ ಮಾಡೋಣ ಎಕ್ಸ್ ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ ಬರೆದಿದ್ದಾರೆ. ನಾನು ನನ್ನ ಪ್ರೊಫೈಲ್ ಫೋಟೋವನ್ನು ಬದಲಾಯಿಸುತ್ತಿದ್ದೇನೆ ಮತ್ತು ಹಾಗೆ ಮಾಡುವ ಮೂಲಕ ನಮ್ಮ ತ್ರಿವರ್ಣ ಧ್ವಜವನ್ನು ಗೌರವಿಸಲು ನನ್ನೊಂದಿಗೆ ನೀವೂ ಕೂಡ ಕೈಜೋಡಿಸಿ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯದ ಮಹಾ ಹಬ್ಬವನ್ನು ವಿಶೇಷವಾಗಿಸಲು ಕೇಂದ್ರ ಸರ್ಕಾರವು ಆಗಸ್ಟ್ 9 ರಿಂದ ದೇಶದಾದ್ಯಂತ ಪ್ರತಿ ಮನೆಗಳಲ್ಲಿ ತ್ರಿವರ್ಣ ಅಭಿಯಾನವನ್ನು ನಡೆಸುತ್ತದೆ. ಇದು ಆಗಸ್ಟ್ 15 ರಂದು ಕೊನೆಗೊಳ್ಳುತ್ತದೆ. ಈ ಅಭಿಯಾನವನ್ನು ಯಶಸ್ವಿಗೊಳಿಸಲು ದೇಶಾದ್ಯಂತ ರ್ಯಾಲಿಗಳನ್ನು ಕೈಗೊಳ್ಳುವಂತೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಪಕ್ಷದ ಕಾರ್ಯಕರ್ತರನ್ನು ಕೇಳಿದೆ. ಈ ಅವಧಿಯಲ್ಲಿ ಬಿಜೆಪಿ ಕಾರ್ಯಕರ್ತರು ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ.

