Bengaluru 27°C
Ad

ಎಲ್‌ ಕೆ ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದ ಮೋದಿ

ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೊದಲು ಮಾಜಿ ಗೃಹ ಸಚಿವ, ಬಿಜೆಪಿಯ ಹಿರಿಯ ನಾಯಕ, ತಮ್ಮ ರಾಜಕೀಯ ಗುರು ಎಲ್‌ ಕೆ ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು.

ನವದೆಹಲಿ: ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೊದಲು ಮಾಜಿ ಗೃಹ ಸಚಿವ, ಬಿಜೆಪಿಯ ಹಿರಿಯ ನಾಯಕ, ತಮ್ಮ ರಾಜಕೀಯ ಗುರು ಎಲ್‌ ಕೆ ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು.

Ad
300x250 2

ಮಧ್ಯಾಹ್ನ ಸಂಸತ್‌ನ ಸೆಂಟ್ರಲ್‌ ಹಾಲ್‌ನಲ್ಲಿ ಎನ್‌ಡಿಎ ಸಂಸದರನ್ನು ಉದ್ದೇಶಿಸಿ ಮೋದಿ ಮಾತನಾಡಿದರು.  ಫೆಬ್ರವರಿಯಲ್ಲಿ ಮೋದಿ ಅವರು ಅಡ್ವಾಣಿ ಅವರಿಗೆ ಈ ಬಾರಿ ಭಾರತ ರತ್ನ ನೀಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು. ನಂತರ ಮಾರ್ಚ್‌ನಲ್ಲಿ ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಭಾರತ ರತ್ನ ನೀಡಿ ಗೌರವಿಸಲಾಗಿತ್ತು.

ಅಡ್ವಾಣಿ ಅವರು ಗುಜರಾತಿನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದಾಗ ಮೋದಿ ಅವರು ಯಶಸ್ವಿಯಾಗಿ ಚುನಾವಣೆಯನ್ನು ಸಂಘಟಿಸುತ್ತಿದ್ದರು. ಇವರಲ್ಲಿನ ನಾಯಕತ್ವ ಕೌಶಲ್ಯವನ್ನು ನೋಡಿ ಬಿಜೆಪಿ ಹೈಕಮಾಂಡ್‌ 2001ರಲ್ಲಿ ಮೋದಿ ಅವರಿಗೆ ಸಿಎಂ ಹುದ್ದೆ ನೀಡಿತ್ತು.

ಮೋದಿ ಅವರು ಈ ಹಿಂದೆ ತಮ್ಮ ರಾಜಕೀಯ ಭಾಷಣದಲ್ಲಿ ಅಡ್ವಾಣಿ ಅವರ ಕೆಲಸವನ್ನು ಸ್ಮರಿಸುತ್ತಿದ್ದರು. ವಿರೋಧಿಗಳು ಬಿಜೆಪಿಯನ್ನು ಅಸ್ಪೃಶ್ಯ ಎಂದು ಕರೆಯುತ್ತಿದ್ದರು.

ಈ ಸಂದರ್ಭದಲ್ಲಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಅಡ್ವಾಣಿ ಈ ಸಿದ್ಧಾಂತವನ್ನು ಸೋಲಿಸಲು ಮತ್ತು ಪಕ್ಷವನ್ನು ದೇಶದಲ್ಲಿ ಪ್ರಮುಖ ರಾಜಕೀಯ ಶಕ್ತಿಯಾಗಿ ಬೆಳೆಯಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು ಎಂದು ಹೇಳಿದರು.

Ad
Ad
Nk Channel Final 21 09 2023
Ad