ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ಮೂರುದಿನಗಳ ವಿದೇಶ ಪ್ರವಾಸ ಕೈಗೊಂಡಿದ್ದು ಇಂದು ಬ್ರೂನಿಗೆ ತೆರಳಿದ್ದಾರೆ. ಇಂದು ಮತ್ತು ಸೆಪ್ಟೆಂಬರ್ 4 ರಂದು ಬ್ರೂನಿಗೆ ಭೇಟಿ ನೀಡಲಿದ್ದಾರೆ, ಬ್ರೂನಿಯ ಸುಲ್ತಾನ್​ ಹಸನಲ್​ ಬೊಲ್ಕಿಯಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಪ್ರಧಾನಿ ಮೋದಿಯವರ ಈ ಭೇಟಿಯಲ್ಲಿ ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸುವುದರ ಜೊತೆಗೆ ಬಾಹ್ಯಾಕಾಶ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲಿದ್ದಾರೆ. ಭಾರತವು ಈಗಾಗಲೇ ಬಾಹ್ಯಾಕಾಶ ಕ್ಷೇತ್ರದಲ್ಲಿ ಬ್ರೂನಿಯೊಂದಿಗೆ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದೆ. ಇದರೊಂದಿಗೆ, ಈ ಭೇಟಿಯು ಕಚ್ಚಾ ತೈಲ ಮತ್ತು ಹೈಡ್ರೋಕಾರ್ಬನ್ ಕ್ಷೇತ್ರದಲ್ಲಿ ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸುತ್ತದೆ. ಇದು ಬ್ರೂನಿಗೆ ಭಾರತದ ಪ್ರಧಾನಿಯ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಭಾರತವು ಬ್ರೂನಿಯಿಂದ ಹೈಡ್ರೋಕಾರ್ಬನ್‌ಗಳನ್ನು ಆಮದು ಮಾಡಿಕೊಳ್ಳುತ್ತಿದೆ.

ಇದಾದ ನಂತರ ಪ್ರಧಾನಿ ಮೋದಿ ಬ್ರೂನಿಯಿಂದ ಸಿಂಗಾಪುರಕ್ಕೆ ಭೇಟಿ ನೀಡಲಿದ್ದಾರೆ. ಸಿಂಗಾಪುರದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ. ಆಸಿಯಾನ್ ಚೌಕಟ್ಟಿನಡಿಯಲ್ಲಿ ಭಾರತ ಮತ್ತು ಸಿಂಗಾಪುರ ನಡುವಿನ ಮುಕ್ತ ವ್ಯಾಪಾರ ಒಪ್ಪಂದವನ್ನು ಪರಿಶೀಲಿಸುವ ಸಾಧ್ಯತೆಯಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ