Bengaluru 21°C
Ad

ದ್ರೌಪದಿ ಮುರ್ಮುರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ

ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಎನ್‌ಡಿಎ ನಾಯಕನಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ನವದೆಹಲಿ: ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಎನ್‌ಡಿಎ ನಾಯಕನಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ದೆಹಲಿಯಲ್ಲಿ ಇಂದು ನಡೆದ ಮೈತ್ರಿಕೂಟದ ಘಟಕಗಳ ಸಭೆಯಲ್ಲಿ ಮೋದಿ ಅವರನ್ನು ಎನ್‌ಡಿಎ ಸಂಸದೀಯ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಅದಾದ ಬಳಿಕ ರಾಷ್ಟ್ರಪತಿಗಳನ್ನು ಭೇಟಿಯಾಗಿ ಮೋದಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಈ ವೇಳೆ ಮಿತ್ರಪಕ್ಷಗಳ ಹಲವು ನಾಯಕರು ಸಾಥ್‌ ನೀಡಿದರು.

ಬಳಿಕ ಮಾತನಾಡಿದ ಮೋದಿ, ರಾಷ್ಟ್ರಪತಿಯವರು ನನಗೆ ಕರೆ ಮಾಡಿ ನಿಯೋಜಿತ ಪ್ರಧಾನಿಯಾಗಿ ಕೆಲಸ ಮಾಡುವಂತೆ ಕೇಳಿಕೊಂಡರು. ಜೊತೆಗೆ ಪ್ರಮಾಣ ವಚನ ಸಮಾರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ.

ಜೂನ್ 9ರ ಸಂಜೆ ಆರಾಮವಾಗಿರುತ್ತೇವೆ ಎಂದು ರಾಷ್ಟ್ರಪತಿಗಳಿಗೆ ಹೇಳಿದ್ದೇನೆ. ಈಗ ರಾಷ್ಟ್ರಪತಿ ಭವನವು ಉಳಿದ ವಿವರಗಳನ್ನು ರೂಪಿಸುತ್ತದೆ. ಅಷ್ಟರೊಳಗೆ ನಾವು ಮಂತ್ರಿ ಮಂಡಳಿಯ ಪಟ್ಟಿಯನ್ನು ರಾಷ್ಟ್ರಪತಿಗಳಿಗೆ ಹಸ್ತಾಂತರಿಸುತ್ತೇವೆ. ಬಳಿಕ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಸಭೆ ಬಳಿಕ ಪ್ರಧಾನಿ ಮೋದಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ್ದರು. ಅವರು ಬಿಜೆಪಿಯ ಹಿರಿಯ ನಾಯಕರಾದ ಭಾರತರತ್ನ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು.

Ad
Ad
Nk Channel Final 21 09 2023
Ad