ಒಡಿಶಾ: ಪ್ರಧಾನಿ ಮೋದಿಯವರು ಇಂದು ಒಡಿಶಾದ ಮಯೂರ್ಭಂಜ್ನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕ ರ‍್ಯಾಲಿಯಲ್ಲೂ ಪಾಲ್ಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯನ್ನು ನೋಡಲು ಸಾವಿರಾರು ಜನರು ಸೇರಿದ್ದರು. ಮೋದಿ ಭಾಷಣ ಆರಂಭಿಸುತ್ತಿದ್ದಂತೆ ಆ ಕಾರ್ಯಕ್ರಮವನ್ನು ವರದಿ ಮಾಡಲು ಬಂದಿದ್ದ ಪತ್ರಕರ್ತರೊಬ್ಬರು ಮೂರ್ಛೆ ತಪ್ಪಿ ಬಿದ್ದಿದ್ದಾರೆ. ಇದನ್ನು ಗಮನಿಸಿದ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ನಿಲ್ಲಿಸಿ, ಆ ಪತ್ರಕರ್ತನ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.
ಚುನಾವಣಾ ರ‍್ಯಾಲಿಗಳಲ್ಲಿ ಮಾತನಾಡುವಾಗ ಸಭೆಯಲ್ಲಿ ಸೇರಿದ್ದ ಜನರನ್ನು ಸೂಕ್ಷ್ಮವಾಗಿ ಗಮನಿಸುವ ಪ್ರಧಾನಿ ಮೋದಿ ಇಂದು ಕೂಡ ತಮ್ಮ ಭಾಷಣದ ವೇಳೆ ಮೂರ್ಛೆ ತಪ್ಪಿ ಬಿದ್ದ ಪತ್ರಕರ್ತನನ್ನು ಗಮನಿಸಿದ್ದಾರೆ.
ಈ ವೇಳೆ ತಮ್ಮ ಭಾಷಣವನ್ನು ನಿಲ್ಲಿಸಿದ ಅವರು ಅವರ ವೈದ್ಯಕೀಯ ತಂಡವನ್ನು ಕರೆದು, ಆದಷ್ಟು ಬೇಗ ಆ ಪತ್ರಕರ್ತನನ್ನು ತಪಾಸಣೆ ಮಾಡಲು ಸೂಚಿಸಿದರು. ಆತನಿಗೆ ಬೇಗ ಯಾರಾದರೂ ನೀರು ಕೊಡಿ. ಅವರಿಗೆ ಗಾಳಿ ಬೇಕಾಗಿದೆ ಎಲ್ಲರೂ ಸ್ವಲ್ಪ ದೂರ ಸರಿಯಿರಿ. ನಮ್ಮ ವೈದ್ಯರ ತಂಡ ಆತನನ್ನು ತಪಾಸಣೆ ಮಾಡುತ್ತದೆ. ನೀವು ಯಾರೂ ಚಿಂತಿಸಬೇಡಿ ಎಂದು ಪ್ರಧಾನಿ ಹೇಳಿದ್ದಾರೆ.
ಪ್ರಧಾನಿ ಮೋದಿಯವರ ಸೂಚನೆಯಂತೆ ಆತನಿಗೆ ತಕ್ಷಣದ ವೈದ್ಯಕೀಯ ಚಿಕಿತ್ಸೆ ನೀಡಲಾಯಿತು ಮತ್ತು ನಂತರ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
https://x.com/narendramodi/status/1795726737898389517