ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟವು ಸ್ಪಷ್ಟ ಬಹುಮತ ಪಡೆದ ಬೆನ್ನಲ್ಲೇ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
Ad
ದೆಹಲಿಯಲ್ಲಿರುವ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದಿರು. ಮೋದಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
Ad
ನರೇಂದ್ರ ಮೋದಿ ಅವರ ಜತೆಗೆ ಹಲವು ಸಂಸದರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶದಲ್ಲಿ 10 ವರ್ಷಗಳ ಬಳಿಕ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು,
Ad
ಟಿಡಿಪಿ, ಜೆಡಿಯು, ಜೆಡಿಎಸ್ ಹಾಗೂ ಎಲ್ಜೆಪಿ ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಭಾರತದ ಸಾವಿರಾರು ಗಣ್ಯರ ಜತೆಗೆ ನೆರೆ ರಾಷ್ಟ್ರಗಳ ನಾಯಕರು ಕೂಡ ಭಾಗವಹಿಸಿದ್ದರು.
Ad
.
Ad
Ad