Bengaluru 21°C
Ad

ಸೆ.21-23 ವರೆಗೆ ಮೋದಿ ಅಮೇರಿಕಾ ಭೇಟಿ : ಶೃಂಗಸಭೆಯಲ್ಲಿ ಭಾಗಿ

ಪ್ರಧಾನಿ ನರೇಂದ್ರ ಮೋದಿ ಸೆ.21-23 ವರೆಗೆ ಅಮೇರಿಕಾ ಪ್ರವಾಸ ಕೈಗೊಳ್ಳಲಿದ್ದು, ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೆ.21-23 ವರೆಗೆ ಅಮೇರಿಕಾ ಪ್ರವಾಸ ಕೈಗೊಳ್ಳಲಿದ್ದು, ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇದೇ ಪ್ರವಾಸದಲ್ಲಿ ಮೋದಿ ನ್ಯೂಯಾರ್ಕ್ ನಲ್ಲಿ ನಡೆಯಲಿರುವ, ವಿಶ್ವದ ಹಲವು ನಾಯಕರು ಇರಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಟಣೆಯ ಪ್ರಕಾರ, ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಆಯೋಜಿಸಿರುವ ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ನಡೆಯಲಿರುವ ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಕ್ವಾಡ್ ಶೃಂಗಸಭೆಯಲ್ಲಿ, ನಾಯಕರು ಕಳೆದ ಒಂದು ವರ್ಷದಲ್ಲಿ ಕ್ವಾಡ್ ಸಾಧಿಸಿದ ಪ್ರಗತಿಯನ್ನು ಪರಿಶೀಲಿಸುತ್ತಾರೆ ಮತ್ತು ಇಂಡೋ-ಪೆಸಿಫಿಕ್ ಪ್ರದೇಶದ ದೇಶಗಳಿಗೆ ತಮ್ಮ ಅಭಿವೃದ್ಧಿ ಗುರಿಗಳು ಮತ್ತು ಆಕಾಂಕ್ಷೆಗಳನ್ನು ತಲುಪಲು ಸಹಾಯ ಮಾಡಲು ಮುಂದಿನ ವರ್ಷದ ಕಾರ್ಯಸೂಚಿಯ ಬಗ್ಗೆ ನಿರ್ಧರಿಸುತ್ತಾರೆ. ಮುಂದಿನ ಕ್ವಾಡ್ ಶೃಂಗಸಭೆಯನ್ನು ಭಾರತ ಆಯೋಜಿಸಲಿದೆ.
Ad
Ad
Nk Channel Final 21 09 2023