Bengaluru 26°C
Ad

ಪ್ರಮಾಣ ವಚನಕ್ಕೂ ಮುನ್ನ ಗಾಂಧಿ, ವಾಜಪೇಯಿ, ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಮೋದಿ

ಮೂರನೇ ಬಾರಿ ಗದ್ದುಗೆ ಏರಲಿರುವ ನರೇಂದ್ರ ಮೋದಿ  ಇಂದು (ಜೂನ್‌ 9) ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಹಿನ್ನೆಲೆಯಲ್ಲಿ ಮೋದಿ ಅವರು ಇಂದು ಬೆಳಗ್ಗೆ ಮಹಾತ್ಮ ಗಾಂಧಿ ಮತ್ತು ವಾಜಪೇಯಿ ಸಮಾಧಿ ಬಳಿಗೆ ತೆರಳಿ ಗೌರವ ವಂದನೆ ಸಲ್ಲಿಸಿದರು.

ನವದೆಹಲಿ: ಮೂರನೇ ಬಾರಿ ಗದ್ದುಗೆ ಏರಲಿರುವ ನರೇಂದ್ರ ಮೋದಿ  ಇಂದು (ಜೂನ್‌ 9) ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಹಿನ್ನೆಲೆಯಲ್ಲಿ ಮೋದಿ ಅವರು ಇಂದು ಬೆಳಗ್ಗೆ ಮಹಾತ್ಮ ಗಾಂಧಿ ಮತ್ತು ವಾಜಪೇಯಿ ಸಮಾಧಿ ಬಳಿಗೆ ತೆರಳಿ ಗೌರವ ವಂದನೆ ಸಲ್ಲಿಸಿದರು.

ಮೊದಲಿಗೆ ರಾಜಘಾಟ್ ಗೆ ತೆರಳಿ, ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಗೌರವ ವಂದನೆ ಸಲ್ಲಿಸಿದ ಮೋದಿ, ತದನಂತರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗೆ ತೆರಳಿ ಗೌರವ ವಂದನೆ ಸಲ್ಲಿಸಿದರು.

ರಾಷ್ಯ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಮೋದಿ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ಮೂರು ಸೇನಾಪಡೆಗಳು ಮುಖ್ಯಸ್ಥರು ಮೋದಿ ಅವರಿಗೆ ಸಾಥ್ ನೀಡಿದರು.

ಸಂಜೆ 7:31ರ ಹೊತ್ತಿಗೆ ನರೇಂದ್ರ ಮೋದಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

Ad
Ad
Nk Channel Final 21 09 2023
Ad