ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಹಿನ್ನೆಲೆಯಲ್ಲಿ ದುಬೈನ ಪ್ರತಿಷ್ಠಿತ ಬುರ್ಜ್ ಖಲೀಫಾ ವಿಶೇಷವಾಗಿ ಬೆಳಗಿತು. ಭಾರತದಿಂದ ದುಬೈವರೆಗೆ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಮೊಳಗಿದವು.
25 ವರ್ಷಕ್ಕೂ ಹೆಚ್ಚು ಕಾಲ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಪ್ರಧಾನಿ ಮೋದಿ ಅವರ ಜನ್ಮದಿನದಂದು, ಭಾರತದ ಅಭಿವೃದ್ಧಿ, ಸ್ವಾವಲಂಬನೆ ಹಾಗೂ ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನಮಾನಕ್ಕೆ ಒತ್ತು ನೀಡುತ್ತಿರುವ ಅವರ ಸೇವೆಯನ್ನು ಸ್ಮರಿಸಲಾಯಿತು.

