Bengaluru 21°C

ಪ್ರಧಾನಿ ಮೋದಿಗೆ ಬಾಂಗ್ಲಾದೇಶದ ಮೊಹಮ್ಮದ್‌ ಯೂನಸ್‌ ಕರೆ!

ಪ್ರಧಾನಿ  ಮೋದಿಗೆ ಬಾಂಗ್ಲಾದೇಶ ಸರ್ಕಾರದ ಹಂಗಾಮಿ ಮುಖ್ಯ ಸಲಹೆಗಾರ ಮೊಹಮ್ಮದ್‌ ಯೂನಸ್‌ ಕರೆ ಮಾಡಿ ಬಾಂಗ್ಲಾದೇಶದ ಪ್ರಸ್ತುತ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದ್ದಾರೆ.

ನವದೆಹಲಿ: ಪ್ರಧಾನಿ  ಮೋದಿಗೆ ಬಾಂಗ್ಲಾದೇಶ ಸರ್ಕಾರದ ಹಂಗಾಮಿ ಮುಖ್ಯ ಸಲಹೆಗಾರ ಮೊಹಮ್ಮದ್‌ ಯೂನಸ್‌ ಕರೆ ಮಾಡಿ ಬಾಂಗ್ಲಾದೇಶದ ಪ್ರಸ್ತುತ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದ್ದಾರೆ.


ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರಿಂದ ದೂರವಾಣಿ ಕರೆ ಸ್ವೀಕರಿಸಲಾಗಿದೆ, ಅವರು ಪ್ರಸ್ತುತ ತಲೆದೋರಿರುವ ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.


ಪ್ರಜಾಸತ್ತಾತ್ಮಕ, ಸ್ಥಿರ, ಶಾಂತಿಯುತ ಮತ್ತು ಪ್ರಗತಿಪರ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದರು. ಬಾಂಗ್ಲಾದೇಶದಲ್ಲಿರುವ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ರಕ್ಷಣೆ, ಸುರಕ್ಷತೆ ಮತ್ತು ಭದ್ರತೆಯನ್ನು ಅವರು ಭರವಸೆ ನೀಡಿದರು ಎಂದು ಹೇಳಿದ್ದಾರೆ.


 

Nk Channel Final 21 09 2023