Bengaluru 23°C
Ad

ಚುನಾವಣೆಯಲ್ಲಿ 64.2 ಕೋಟಿಗೂ ಅಧಿಕ ಜನರು ಮತದಾನ ಮಾಡಿದ್ದಾರೆ: ಪಿ.ರಾಜೀವ್‌ ಕುಮಾರ್‌

ಲೋಕಸಭಾ ಚುನಾವಣೆಯಲ್ಲಿ 64.2 ಕೋಟಿಗೂ ಅಧಿಕ ಜನರು ಮತದಾನ ಮಾಡಿ, ವಿಶ್ವ ದಾಖಲೆ ಬರೆದಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಪಿ.ರಾಜೀವ್‌ ಕುಮಾರ್‌ ಹೇಳಿದ್ದಾರೆ. 

ನವದೆಹಲಿ:  ಲೋಕಸಭಾ ಚುನಾವಣೆಯಲ್ಲಿ 64.2 ಕೋಟಿಗೂ ಅಧಿಕ ಜನರು ಮತದಾನ ಮಾಡಿ, ವಿಶ್ವ ದಾಖಲೆ ಬರೆದಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಪಿ.ರಾಜೀವ್‌ ಕುಮಾರ್‌ ಹೇಳಿದ್ದಾರೆ.

ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುವ ಮುನ್ನಾ ದಿನವೇ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗ ಹಲವು ವಿಚಾರಗಳನ್ನು ಹಂಚಿಕೊಂಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೀವ್‌ ಕುಮಾರ್‌ ಈ ಬಾರಿ 64.2 ಕೋಟಿಗೂ ಅಧಿಕ ಮತದಾರರು ಮತದಾನ ಮಾಡುವ ಮೂಲಕ ಭಾರತ ವಿಶ್ವ ದಾಖಲೆ ಬರೆದಿದೆ. ಜೊತೆಗೆ ಮಹಿಳೆಯರೂ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ದೇಶಾದ್ಯಂತ 64.2 ಕೋಟಿಗೂ ಅಧಿಕ ಜನ ಹಕ್ಕು ಚಲಾಯಿಸಿದ್ದಾರೆ. ಇದು G7 ರಾಷ್ಟ್ರಗಳಿಗಿಂತ 1.5 ಪಟ್ಟು ಹಾಗೂ 27 ಯುರೋಪಿಯನ್‌ ರಾಷ್ಟ್ರಗಳಿಗಿಂತಲೂ 2.5 ಪಟ್ಟು ಹೆಚ್ಚಾಗಿದೆ. ಅಲ್ಲದೇ ದೇಶದಲ್ಲಿ 31 ಕೋಟಿ ಮಹಿಳಾ ಮತದಾರರು ಮತ ಚಲಾಯಿಸಿದ್ದು, ಇದೇ ಮೊದಲಬಾರಿಗೆ ಎಂದರು.

ಇದೇ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ ಮತದಾರ ಪ್ರಭುಗಳಿಗೆ ಆಯೋಗದ ಅಧಿಕಾರಿಗಳು ಎದ್ದುನಿಂತು ಚಪ್ಪಾಳೆ ಹೊಡೆಯುವ ಮೂಲಕ ಅಭಿನಂದಿಸಿದರು.

Ad
Ad
Nk Channel Final 21 09 2023
Ad