Bengaluru 25°C
Ad

ಇರಾನ್‌ ಅಧ್ಯಕ್ಷ ನಿಧನಕ್ಕೆ ಭಾರತದಲ್ಲಿ ಇಂದು ಒಂದು ದಿನದ ಶೋಕಾಚರಣೆ

ಹೆಲಿಕಾಪ್ಟರ್‌ ದುರಂತದಲ್ಲಿ ಸಾವನಪ್ಪಿರುವ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ಇಂದು (ಮೇ 21) ಭಾರತದಲ್ಲಿ ಒಂದು ದಿನದ ಶೋಕಾಚರಣೆ ಆಚರಿಸಲು ನಿರ್ಧರಿಸಿದ್ದು ಗೃಹ ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ.

ನವದೆಹಲಿ : ಹೆಲಿಕಾಪ್ಟರ್‌ ದುರಂತದಲ್ಲಿ ಸಾವನಪ್ಪಿರುವ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ಇಂದು (ಮೇ 21) ಭಾರತದಲ್ಲಿ ಒಂದು ದಿನದ ಶೋಕಾಚರಣೆ ಆಚರಿಸಲು ನಿರ್ಧರಿಸಿದ್ದು ಗೃಹ ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ. ಅಗಲಿದ ಗಣ್ಯರಿಗೆ ಗೌರವದ ಸಂಕೇತವಾಗಿ, ಮೇ 21 ರಂದು ಭಾರತದಾದ್ಯಂತ ಒಂದು ದಿನದ ರಾಜ್ಯ ಶೋಕಾಚರಣೆ ನಡೆಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

ರಾಷ್ಟ್ರಧ್ವಜವನ್ನು ನಿಯಮಿತವಾಗಿ ಹಾರಿಸುವ ಭಾರತದಾದ್ಯಂತದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಮಟ್ಟದಲ್ಲಿ ಹಾರಾಡುತ್ತದೆ ಮತ್ತು (ಮಂಗಳವಾರ) ಯಾವುದೇ ಅಧಿಕೃತ ಮನರಂಜನೆ ಇರುವುದಿಲ್ಲ ಎಂದು ತಿಳಿಸಿದೆ.

Ad
Ad
Nk Channel Final 21 09 2023
Ad