Bengaluru 29°C
Ad

ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಶವವಾಗಿ ಪತ್ತೆ

ವೈದ್ಯಕೀಯ ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಂ ಅನಾರ್ ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಖ್​ ಹಸೀನಾ ಅವರ ಪಕ್ಷದ ಸದಸ್ಯರಾದ ಅನಾರ್ ಮೇ 12ರಂದು ಕೋಲ್ಕತ್ತಾಗೆ ಬಂದಿದ್ದರು.

ಕೋಲ್ಕತ್ತಾ:  ವೈದ್ಯಕೀಯ ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಂ ಅನಾರ್ ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಖ್​ ಹಸೀನಾ ಅವರ ಪಕ್ಷದ ಸದಸ್ಯರಾದ ಅನಾರ್ ಮೇ 12ರಂದು ಕೋಲ್ಕತ್ತಾಗೆ ಬಂದಿದ್ದರು.

ಕಳೆದ 8 ದಿನಗಳಿಂದ ನಾಪತ್ತೆಯಾಗಿದ್ದ ಅನ್ವರುಲ್ ಇದೀಗ ಶವವಾಗಿ ಪತ್ತೆಯಾಗಿದ್ದಾರೆ.ವೈದ್ಯಕೀಯ ಚಿಕಿತ್ಸೆಗೆಂದು ಕೋಲ್ಕತ್ತಾಗೆ ಬಂದಿದ್ದರು, ನಗರದ ಬಾರಾನಗರದಲ್ಲಿರುವ ಸ್ನೇಹಿತ ಗೋಪಾಲ್​ ಬಿಸ್ವಾಸ್ ಅವರ ಮನೆಯಲ್ಲಿ ಉಳಿದುಕೊಂಡಿದ್ದರು. ಮೇ 13ರಂದು ಯಾರನ್ನೋ ಭೇಟಿಯಾಗಲು ಹೋಗುತ್ತಿದ್ದೇನೆಂದು ಹೊರಟವರು ಹಿಂದಿರುಗಿ ಬಂದಿರಲಿಲ್ಲ.

, ಹತ್ಯೆಯಲ್ಲಿ ಅಂತಾರಾಷ್ಟ್ರೀಯ ಕ್ರಿಮಿನಲ್​ಗಳ ಕೈವಾಡವಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ತನಿಖೆಯಲ್ಲಿ ನಂತರ ಪೊಲೀಸರು ಮಹಿಳೆ ಸೇರಿದಂತೆ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳನ್ನು ಆರೋಪಿಗಳು ಎಂದು ಗುರುತಿಸಿದ್ದಾರೆ. ಅವರಲ್ಲಿ ಒಬ್ಬರನ್ನು ಬಂಧಿಸಲಾಗಿದೆ.

Ad
Ad
Nk Channel Final 21 09 2023
Ad