Ad

ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ಆರೋಗ್ಯ ಸ್ಥಿತಿ ಗಂಭೀರ

ಕೆಲವು ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್(70) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಸಂಸ್ಥೆಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಕೋಲ್ಕತಾ: ಕೆಲವು ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್(70) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಸಂಸ್ಥೆಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

Ad
300x250 2

ಕೆಳಗೆ ಬಿದ್ದ ರಾಯ್ ಅವರು ಇನ್ನೂ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ ಆದರೆ ಸ್ಥಿರವಾಗಿದೆ. ನಮ್ಮ ವೈದ್ಯರು ಹಗಲಿರುಳು ಅವರನ್ನು ನಿಗಾ ವಹಿಸುತ್ತಿದ್ದಾರೆ ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.

2017 ರಲ್ಲಿ ಬಿಜೆಪಿಗೆ ಸೇರಿದ್ದರು ಮತ್ತು 2021 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಟಿಕೆಟ್‌ನಲ್ಲಿ ಕೃಷ್ಣನಗರ ಉತ್ತರ ಕ್ಷೇತ್ರದಿಂದ ಗೆದ್ದಿದ್ದರು.ಆದಾಗ್ಯೂ, ಅವರು ನಂತರ ಟಿಎಂಸಿಗೆ ಮರಳಿದ್ದರು.

Ad
Ad
Nk Channel Final 21 09 2023
Ad