ಚೆನ್ನೈ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತಮಿಳುನಾಡು ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ಶುಕ್ರವಾರ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಶಂಕಿತರನ್ನು ಬಂಧಿಸಲಾಗಿದೆ.
ಈ ಬೆಳವಣಿಗೆಯನ್ನು ಚೆನ್ನೈ ಹೆಚ್ಚುವರಿ ಆಯುಕ್ತ (ಉತ್ತರ) ಆಸ್ರಾ ಗರ್ಗ್ ಐಪಿಎಸ್ ಅವರು ಖಚಿತಪಡಿಸಿದ್ದಾರೆ.ಹತ್ಯೆಯ ಹಿಂದಿನ ಉದ್ದೇಶವನ್ನು ಖಚಿತಪಡಿಸಿಕೊಳ್ಳಲು ಬಂಧಿತರನ್ನು ಕೂಲಂಕಷವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಆರ್ಮ್‌ಸ್ಟ್ರಾಂಗ್ ಅವರನ್ನು ಕೊಂದ ನಂತರ ಕೊಲೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿರುವ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದೆ.

