Bengaluru 28°C
Ad

ಆಂಧ್ರದ ನೂತನ ಮುಖ್ಯಮಂತ್ರಿಯಾಗಿ ʻಚಂದ್ರಬಾಬು ನಾಯ್ಡುʼ ಪ್ರಮಾಣವಚನ ಸ್ವೀಕಾರ

Chandrababu Naidu

ಹೈದರಾಬಾದ್‌ : ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಅವರು ದೇವರ ಸಾಕ್ಷಿಯಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗುತ್ತಿದ್ದಾರೆ. ಚಂದ್ರಬಾಬು ನಾಯ್ಡು ಅವರೊಂದಿಗೆ ಪವನ್ ಕಲ್ಯಾಣ್ ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಚಿರಂಜೀವಿ, ರಾಮ್ ಚರಣ್, ರಜನಿಕಾಂತ್, ಮೋಹನ್ ಬಾಬು, ಅಲ್ಲು ಅರ್ಜುನ್ ಮುಂತಾದವರು ಭಾಗಿಯಾಗಿದ್ದರು. ಇನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಎನ್ಡಿಎಯ ಉನ್ನತ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

 

Ad
Ad
Nk Channel Final 21 09 2023
Ad