ಹರ್ಯಾಣ :  ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಹ್ಯಾಟ್ರಿಕ್‌ ಗೆಲುವು ದಾಖಲಿಸಿದೆ. ಬಿಜೆಪಿ ಗೆಲುವಿನ ನಂತರವೇ ಸಿಎಂ ಯಾರಾಗುತ್ತಾರೆ ಎಂಬುದು ಬಹುತೇಕ ನಿರ್ಧಾರವಾಗಿದೆ. ನಾಯಬ್ ಸಿಂಗ್ ಹಯಾರ್ಣದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಮೋಹನ್​ ಲಾಲ್ ಬಧೋಲಿ ಮತ್ತು ನಾಯಬ್ ಸೈನಿ ಇಂದು ದೆಹಲಿಗೆ ತೆರಳುತ್ತಿದ್ದು, ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ, ಅಕ್ಟೋಬರ್ 12 ವಿಜಯದಶಮಿಯಂದು ನಾಯಬ್ ಸೈನಿ ಹಯಾರ್ಣದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಹರ್ಯಾಣದಲ್ಲಿ ಗೆಲುವಿನ ನಂತರ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಹರ್ಯಾಣದಲ್ಲಿ ಸತತ ಮೂರನೇ ಬಾರಿಗೆ ಬಿಜೆಪಿಗೆ ಅಧಿಕಾರ ನೀಡುವ ಮೂಲಕ ಇತಿಹಾಸ ಸೃಷ್ಟಿಸಿದೆ.