ನವದೆಹಲಿ: 17ನೇ ಲೋಕಸಭಾ ಅವಧಿ ಅಂತ್ಯವಾದ ಹಿನ್ನೆಲೆ ನರೇಂದ್ರ ಮೋದಿ ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದರು.

ನರೇಂದ್ರ ಮೋದಿಯವರ ಜೊತೆಯಲ್ಲಿ ಅವರ ಸಂಪುಟದ ಎಲ್ಲಾ ಸಚಿವರು ಸಹ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಬಹುಮತ ಸಿಕ್ಕಿದ್ದು, ನರೇಂದ್ರ ಮೋದಿಯವರೇ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಜೂನ್ 8ರ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಚುನಾವಣೆಯಲ್ಲಿ 293 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.