Bengaluru 23°C
Ad

ಜೂನ್ 9 ರ ಭಾನುವಾರ ಸಂಜೆ 6 ಗಂಟೆಗೆ ನರೇಂದ್ರ ಮೋದಿ ಪ್ರಮಾಣ ವಚನ

ಜೂನ್ 9 ರ ಭಾನುವಾರ ಸಂಜೆ 6 ಗಂಟೆಗೆ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನುವುದು ಖಚಿತವಾಗಿದೆ. 

ನವದೆಹಲಿ: ಜೂನ್ 9 ರ ಭಾನುವಾರ ಸಂಜೆ 6 ಗಂಟೆಗೆ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನುವುದು ಖಚಿತವಾಗಿದೆ.

ಇಂದು ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಎನ್‌ಡಿಎ  ಸಂಸದರ ಸಭೆ ನಡೆಯಿತು. ಈ ವೇಳೆ ಪ್ರಹ್ಲಾದ್‌ ಜೋಶಿ ಜೂನ್‌ 9 ರಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

ಈ ಭಾನುವಾರ ಪ್ರಮಾಣ ವಚನ ನಡೆಯಲಿದೆ ಎನ್ನುವುದು ಅಧಿಕೃತವಾಗಿ ಪ್ರಕಟವಾಗಿದೆ. ಯಾರೆಲ್ಲ ಪ್ರಮಾಣ ವಚನ ನಡೆಸಲಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ.

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 293 ಸ್ಥಾನಗಳನ್ನು ಗೆದ್ದಿದೆ. ಚಂದ್ರಬಾಬು ನಾಯ್ಡು ಅವರ ಟಿಡಿಪಿ ಮತ್ತು ನಿತೀಶ್ ಕುಮಾರ್ ಅವರ ಜೆಡಿಯು ಕ್ರಮವಾಗಿ 16 ಮತ್ತು 12 ಸ್ಥಾನಗಳನ್ನು ತಮ್ಮ ರಾಜ್ಯಗಳಲ್ಲಿ ಗೆದ್ದುಕೊಂಡಿದ್ದಾರೆ.

Ad
Ad
Nk Channel Final 21 09 2023
Ad