Bengaluru 27°C
Ad

ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಜೂನ್ 9ಕ್ಕೆ ಮುಂದೂಡಿಕೆ

Pm (1)

ದೆಹಲಿ: ಪ್ರಧಾನಿ ಮೋದಿ ಅವರು ಜೂನ್ 9ರಂದು ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ದಿನಾಂಕ ಫಿಕ್ಸ್ ಆಗಿದೆ. ಇದಕ್ಕೂ ಮುನ್ನ ಜೂನ್ 8ರಂದು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದು ಸುದ್ದಿಯಾಗಿತ್ತು.

ಆದರೆ ಇದೀಗ ಅಧಿಕೃತವಾಗಿ ದಿನಾಂಕ ಫಿಕ್ಸ್ ಆಗಿದ್ದು ಜೂನ್ 9ರಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಮೋದಿ ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರವನ್ನು ಸಲ್ಲಿಸಿದ್ದರು. ರಾಷ್ಟ್ರಪತಿಗಳು ಪ್ರಧಾನಿ ಮತ್ತು ಮಂತ್ರಿ ಪರಿಷತ್ತಿನ ರಾಜೀನಾಮೆಯನ್ನು ಅಂಗೀಕರಿಸಿದ್ದು ಹಂಗಾಮಿ ಪ್ರಧಾನಿಯಾಗಿ ಪ್ರಧಾನಿ ಮೋದಿ ಮುಂದುವರೆಯಲಿದ್ದಾರೆ.

ಶುಕ್ರವಾರ ಬೆಳಗ್ಗೆ 11:00 ಗಂಟೆಗೆ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಎನ್‌ಡಿಎ ಸಂಸದರ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎಲ್ಲಾ ಘಟಕಗಳ ರಾಷ್ಟ್ರೀಯ ಅಧ್ಯಕ್ಷರಲ್ಲದೆ, ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಸಹ ಭಾಗವಹಿಸಲಿದ್ದಾರೆ

Ad
Ad
Nk Channel Final 21 09 2023
Ad