ವದೆಹಲಿ: ದಕ್ಷಿಣ ಚಿತ್ರರಂಗದ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಕಳೆದ ಕೆಲವು ದಿನಗಳಿಂದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸುದ್ದಿಯಲ್ಲಿದ್ದಾರೆ. ಕಳೆದ ತಿಂಗಳು ಅವರ ಮೇಲೆ 21 ವರ್ಷದ ಯುವತಿ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದು, ಸೆ.19 ರಂದು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಆದರೆ ಈಗ ಅವರ ರಾಷ್ಟ್ರೀಯ ಪ್ರಶಸ್ತಿಯನ್ನು ರದ್ದುಗೊಳಿಸಲಾಗಿದೆ.

ಜಾನಿ ಮಾಸ್ಟರ್ ಗೆ ರಾಷ್ಟ್ರೀಯ ಪ್ರಶಸ್ತಿ ಘೋಷಣೆಯಾಗಿದ್ದು, ಅಕ್ಟೋಬರ್ 8 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಅವರಿಗೆ ಪ್ರದಾನ ಮಾಡಬೇಕಿತ್ತು. ಇದರ ನಡುವೆ ಜಾನಿ ಮಾಸ್ಟರ್​ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಅಕ್ಟೋಬರ್ 6 ರಿಂದ ಅಕ್ಟೋಬರ್ 10 ರವರೆಗೆ ಜಾಮೀನು ಸಹ ಪಡೆದಿದ್ದಾರೆ. ಆದರೆ ಈಗ ಅವರ ರಾಷ್ಟ್ರೀಯ ಪ್ರಶಸ್ತಿಯನ್ನು ರದ್ದುಗೊಳಿಸಲಾಗಿದೆ.