Ad

ನೀಟ್‌ ಅಕ್ರಮ: ಪರೀಕ್ಷೆ ರದ್ದುಗೊಳಿಸುವುದು ಸರಿಯಾದ ಕ್ರಮವಲ್ಲ ಎಂದ ಕೇಂದ್ರ

ಪದವಿಪೂರ್ವ ವೈದ್ಯಕೀಯ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸ್ಪರ್ಧಾತ್ಮಕ ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತನ್ನ ನಿಲುವನ್ನು ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಹೊಸದಿಲ್ಲಿ: ಪದವಿಪೂರ್ವ ವೈದ್ಯಕೀಯ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸ್ಪರ್ಧಾತ್ಮಕ ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತನ್ನ ನಿಲುವನ್ನು ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

Ad
300x250 2

ಈಗಾಗಲೇ ನಡೆದಿರುವ ಪರೀಕ್ಷೆಯನ್ನು ಅಮಾನ್ಯಗೊಳಿಸುವುದಾಗಲಿ ಅಥವಾ ಮರು ಪರೀಕ್ಷೆ ನಡೆಸುವ ಉದ್ದೇಶವಾಗಲೀ ಸರ್ಕಾರಕ್ಕಿಲ್ಲ ಎಂದು ಹೇಳಿದೆ. ಅದೂ ಅಲ್ಲದೇ ಬರೋಬ್ಬರಿ 24ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದ ಈ ಪರೀಕ್ಷೆಯಲ್ಲಿ ಅಷ್ಟು ದೊಡ್ಡ ಮಟ್ಟದಲ್ಲಿ ಈ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.

ನೀಟ್‌ ಅಕ್ರಮದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ ನಡೆದಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ತನ್ನ ಅಫಿಡವಿಟ್‌ ಸಲ್ಲಿಸಿದೆ. 2024 ರ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವುದು ಗಂಭೀರವಾಗಿ ಅಪಾಯಕ್ಕೆ ಕಾರಣವಾಗುತ್ತದೆ.

ಈ ಪರೀಕ್ಷೆಗೆ ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಅವರಿಗೆ ಇದರಿಂದ ಅನ್ಯಾಯ ಆಗುತ್ತದೆ. ದೇಶವ್ಯಾಪಿ ಈ ಅಕ್ರಮ ನಡೆಯದೇ ಇರುವಾಗ ಪರೀಕ್ಷೆ ರದ್ದುಗೊಳಿಸುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಆಗಸ್ಟ್ 11ರಂದು ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

 

 

Ad
Ad
Nk Channel Final 21 09 2023
Ad