Ad

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಜಾರ್ಖಂಡ್‌ನಲ್ಲಿ ಪತ್ರಕರ್ತನ ಬಂಧನ

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಶನಿವಾರ ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಪತ್ರಕರ್ತರೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. 

ದೆಹಲಿ : ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಶನಿವಾರ ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಪತ್ರಕರ್ತರೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.

Ad
300x250 2

ಈತನನ್ನು ಜಮಾಲುದ್ದೀನ್ ಎಂದು ಗುರುತಿಸಲಾಗಿದ್ದು ಹಿಂದಿ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳ ಪ್ರಕಾರ, ಓಯಸಿಸ್ ಶಾಲೆಯ ಪ್ರಾಂಶುಪಾಲ ಎಹ್ಸಾನುಲ್ ಹಕ್ ಮತ್ತು ಉಪ ಪ್ರಾಂಶುಪಾಲ ಇಮ್ತಿಯಾಜ್ ಆಲಂ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಪಾತ್ರವಹಿಸಿದ್ದಾರೆ ಎಂಬ ಶಂಕೆಯಲ್ಲಿ ಬಂಧಿಸಲಾಗಿದೆ.

ಆಲಂ ಅವರನ್ನು ಎನ್‌ಟಿಎ ವೀಕ್ಷಕರಾಗಿ ಮತ್ತು ಓಯಸಿಸ್ ಶಾಲೆಯ ಕೇಂದ್ರ ಸಂಯೋಜಕರಾಗಿ ನೇಮಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಸೋರಿಕೆಗೆ ಸಂಬಂಧಿಸಿದಂತೆ ಜಿಲ್ಲೆಯ ಇನ್ನೂ ಐದು ಜನರನ್ನು ಸಿಬಿಐ ವಿಚಾರಣೆ ನಡೆಸುತ್ತಿದೆ ಎಂದು ಹೇಳಿದರು.

 

 

Ad
Ad
Nk Channel Final 21 09 2023
Ad