Bengaluru 22°C
Ad

ಹೊಸ ಕ್ರಿಮಿನಲ್ ಕಾನೂನು ಇಂದಿನಿಂದ ಜಾರಿ: ಏನು ಬದಲಾವಣೆ?

ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳನ್ನು ಕೇಂದ್ರ ಸರ್ಕಾರ ತಿದ್ದು ಮಾಡಿದೆ. ಭಾರತೀಯ ದಂಡ ಸಂಹಿತೆ, ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು ತಿದ್ದುಪಡಿಗೆ ಒಳಪಡಿಸಲಾಗಿದೆ

ನವದೆಹಲಿ: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳನ್ನು ಕೇಂದ್ರ ಸರ್ಕಾರ ತಿದ್ದು ಮಾಡಿದೆ. ಭಾರತೀಯ ದಂಡ ಸಂಹಿತೆ, ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು ತಿದ್ದುಪಡಿಗೆ ಒಳಪಡಿಸಲಾಗಿದೆ. ಇವುಗಳ ಬದಲಾಗಿ ಮೂರು ಹೊಸ ಕಾನೂನುಗಳು ಜುಲೈ 1ರಿಂದಲೇ ದೇಶಾದ್ಯಂತ ಜಾರಿಗೆ ಬರಲಿವೆ.

Ad
300x250 2

ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023 ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ.

ಈಗಿರುವ ಭಾರತೀಯ ದಂಡ ಸಂಹಿತೆಯಲ್ಲಿ 420 ಸೆಕ್ಷನ್ ಅನ್ನು ವಂಚನೆ ಅಪರಾಧಕ್ಕೆ ಅನ್ವಯಿಸಲಾಗುತ್ತದೆ. ಆದರೆ, ಭಾರತೀಯ ನ್ಯಾಯ ಸಂಹಿತೆಯ ಈ ಅಪರಾಧಕ್ಕೆ 316(2), (3) ಮತ್ತು (4) ಸೆಕ್ಷನ್‌ಗಳು ಇರಲಿವೆ. ವಂಚನೆ ಅಪರಾಧಕ್ಕಾಗಿ ಈ ಸೆಕ್ಷನ್‌ಗಳಡಿ ಅಪರಾಧಿಗೆ ಮೂರು ವರ್ಷ, ಐದು ವರ್ಷ ಅಥವಾ ಏಳು ವರ್ಷಗಳವರೆಗೆ ದಂಡ ಸಹಿತ ಜೈಲು ಶಿಕ್ಷೆಯನ್ನು ವಿಸ್ತರಿಸಬಹುದಾಗಿದೆ.

 

Ad
Ad
Nk Channel Final 21 09 2023
Ad