Bengaluru 22°C
Ad

ʼಜುಲೈ 1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್‌ ಕಾನೂನು ಜಾರಿʼ

ಜುಲೈ 1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿಗೆ ಬರಲಿವ ಎಂದು ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ತಿಳಿಸಿದ್ದಾರೆ.

ಕೋಲ್ಕತ್ತಾ: ಜುಲೈ 1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿಗೆ ಬರಲಿವ ಎಂದು ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ತಿಳಿಸಿದ್ದಾರೆ.

ಐಪಿಸಿ, ಇಂಡಿಯನ್ ಎವಿಡೆನ್ಸ್ ಆಕ್ಟ್, ಕ್ರಿಮಿನಲ್ ಪ್ರೊಸೀಜರ್ ಕೋಡ್ ಜಾಗದಲ್ಲಿ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಎಂಬ ಮೂರು ಮಾದರಿ ಕಾನೂನುಗಳು ಜಾರಿಗೆ ಬರಲಿವೆ ಎಂದರು.

ಕೋಲ್ಕತ್ತಾದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆ ಜಾರಿಗೆ ಜಾರಿಗೊಳಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಮುಂದುವರಿದು ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿದ್ದು, ಅವುಗಳ ಅನುಷ್ಠಾನಕ್ಕೆ ಅಗತ್ಯ ತರಬೇತಿ ಈಗಾಗಲೇ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

 

Ad
Ad
Nk Channel Final 21 09 2023
Ad